ತುಂಗಪ್ಪ ಬಂಗೇರರಿಂದ ಬಡವರಿಗೆ ಅಕ್ಕಿ ವಿತರಣೆ ಕಣಿಯೂರಿನಲ್ಲಿಯೂ 15 ಕುಟುಂಬಗಳಿಗೆ ಸಹಾಯ

ಬೆಳ್ತಂಗಡಿ: ಕೊರೊನಾ ವೈರಸ್ ಎಂಬ ಮಹಾಮಾರಿಯ ತಡೆಗಟ್ಟಲು ದೇಶವೇ ಲಾಕ್‍ಡೌನ್ ಆಗಿರುವ ಹಿನ್ನೆಲೆಯಲ್ಲಿ ಅಗತ್ಯ ಸಾಮಾಗ್ರಿಗಳನ್ನು ತರಲು ಕಷ್ಟವಾಗಿರುವ ದಿನಕೂಲಿ ಬಡವರಿಗೆ ಸಂಗಬೆಟ್ಟು ಜಿಲ್ಲಾ ಪಂಚಾಯತ್ ಸದಸ್ಯ ಎಂ.ತುಂಗಪ್ಪ ಬಂಗೇರ ಅವರು ಎ.3 (ಶುಕ್ರವಾರ)ರಂದು ಸಂಕಷ್ಟದಲ್ಲಿರುವ 40ಕ್ಕೂ ಹೆಚ್ಚು ಬಡ ಕುಟುಂಬಗಳಿಗೆ ಅಕ್ಕಿ ಹಾಗೂ ಅಗತ್ಯ ಸಾಮಾಗ್ರಿಗಳನ್ನು ವಿತರಿಸಿದರು.

ಈ ಕಷ್ಟದ ಸಂದರ್ಭದಲ್ಲಿ ಬಡವರಿಗೆ ಸಹಾಯ ಮಾಡುವುದು ನಮ್ಮ ಕರ್ತವ್ಯವಾಗಿದೆ ಎಂದರು.

ಕಣಿಯೂರು ಬಿಜೆಪಿಯಿಂದ ಅಕ್ಕಿ ವಿತರಣೆ:


ಕೊರೊನಾ ವೈರಸ್‍ನಿಂದಾಗಿ ಲಾಕ್‍ಡೌನ್ ಆಗಿರುವ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕಣಿಯೂರು ಗ್ರಾಮದ ಸುಮಾರು 15 ಬಡ ಕುಟುಂಬಗಳಿಗೆ ಬಿಜೆಪಿ ಕಣಿಯೂರು ಗ್ರಾಮ ಸಮಿತಿ ವತಿಯಿಂದ ಅಕ್ಕಿ ವಿತರಿಸಲಾಯಿತು. ಗ್ರಾಮ ಪಂಚಾಯತ್ ಅಧ್ಯಕ್ಷ ಸುನಿಲ್ ಸಾಲಿಯಾನ್,ಪದ್ಮುಂಜ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಕ್ಷಿತ್ ಪಣೆಕ್ಕರ ಹಾಗೂ ಬಿಜೆಪಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.