ದಕ್ಷಿಣ ಕನ್ನಡ ಜಿಲ್ಲೆಯ ಮೊದಲ ಕೊರೊನಾ ಸೋಂಕಿತ ಗುಣಮುಖ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪತ್ತೆಯಾದ ಪ್ರಥಮ ಕೊರೊನಾ ವೈರಸ್ ಸೋಂಕಿತ ಭಟ್ಕಳದ ಯುವಕ ಸಂಪೂರ್ಣ ಚೇತರಿಸಿದ್ದು, ನಾಳೆ (ಎ.6ರಂದು) ಆವರನ್ನು ವೆನ್ಲಾಕ್ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುವುದು ಎಂದು ದ.ಕ.ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಮಾ.19ರಂದು ದುಬೈಯಿಂದ ಮಂಗಳೂರು ವಿಮಾನ ನಿಲ್ದಾಣದ ಮೂಲಕ ಮಂಗಳೂರಿಗೆ ಬಂದಿದ್ದ ಭಟ್ಕಳದ ಸುಮಾರು 22 ವರ್ಷದ ಯುವಕನಿಗೆ ಮಾ.22ರಂದು ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು.

ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು 14 ದಿನಗಳ ನಿಗಾ ಅವಧಿ ಪೂರೈಸಿದ್ದು, ಆವರ ಗಂಟಲಿನ ದ್ರವದ ಮಾದರಿಯನ್ನು ಎ.2 ಮತ್ತು 3ರಂದು ಹೀಗೆ ಮತ್ತೆ 2 ಬಾರಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಇದೀಗ ಅವರ ದ್ರವದ ಮಾದರಿಯ ವರದಿಯು ನೆಗೆಟಿವ್ ಬಂದಿದೆ. ಹಾಗಾಗಿ ಅವರನ್ನು ಎ.6ರಂದು ಆಸ್ಪತ್ರೆಯಿಂದ ಬಿಡುಗಡೆಗೊಳಿಸಲು ನಿರ್ಧರಿಸಲಾಗಿದೆ ಎಂದು ಪ್ರಕಟನಣೆ ತಿಳಿಸಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.