ಬಿಜೆಪಿ ಸಂಸ್ಥಾಪನಾ ದಿನ ಸರಳವಾಗಿ ಆಚರಣೆ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ (ಬಿಜೆಪಿ)ಯ ಸಂಸ್ಥಾಪನಾ ದಿನವಾದ ಎ.6ರಂದು ಬೆಳ್ತಂಗಡಿ ಬಿಜೆಪಿ ಕಚೇರಿಯಲ್ಲಿ ಸರಳವಾಗಿ ಆಚರಿಸಲಾಯಿತು.

ಸಂಸ್ಥಾಪನಾ ದಿನದ ಅಂಗವಾಗಿ ಪಂಡಿತ್ ಧೀನದಯಾಳ್ ಉಪಾಧ್ಯಾಯ ಹಾಗೂ ಡಾ.ಶ್ಯಾಮ ಪ್ರಸಾದ್ ಮುಖರ್ಜಿ ಅವರ ಭಾವಚಿತ್ರಗಳಿಗೆ ಶಾಸಕ ಹರೀಶ್ ಪೂಂಜ, ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಶ್ರೀನಿವಾಸ ಪುಠಾಣಿ, ಸೀತಾರಾಮ್ ಬೆಳಾಲು, ನಗರ ಪಂಚಾಯತ್ ಸದಸ್ಯರಾದ ಜಯಾನಂದ ಗೌಡ, ಶರತ್ ಕುಮಾರ್ ಶೆಟ್ಟಿ, ರಾಜೇಶ್ ಬುಣ್ಣಾನ್ ಅವರು ಪುಷ್ಪಾರ್ಚನೆ ಮಾಡಿದರು. ಇದೇ ಸಂದರ್ಭದಲ್ಲಿ ಬಿಜೆಪಿ ಕಚೇರಿಯ ಮೇಲ್ಭಾಗದಲ್ಲಿ ಪಕ್ಷದ ಧ್ವಜವನ್ನು ಹಾರಿಸಲಾಯಿತು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.