ವೇಣೂರು ಗ್ರಾ.ಪಂ.: ಬಡವರಿಗೆ ಅಗತ್ಯ ಸಾಮಾಗ್ರಿಗಳ ಪೂರೈಕೆಗೆ ಕ್ರಮ

ವೇಣೂರು: ಕೊರೊನಾ ವೈರಸ್ ತಡೆಗಟ್ಟುವ ಮುಂಜಾಗೃತ ಕ್ರಮಗಳ ಬಗ್ಗೆ ಹಾಗೂ ವೇಣೂರು ಗ್ರಾಮ ಪಂಚಾಯತ್‍ನಲ್ಲಿ ಬಡವರಿಗೆ ಅಗತ್ಯ ವಸ್ತುಗಳ ಪೂರೈಕೆಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲು ಗ್ರಾ.ಪಂ. ಅಧ್ಯಕ್ಷೆ ಮೋಹಿನಿ ವಿ. ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಯಿತು.

ಎ.14ರ ನಂತರವೂ ಲಾಕ್‍ಡೌನ್ ಮುಂದುವರಿದರೆ ಜನರಿಗೆ ಆಗುವ ತೊಂದರೆಗಳ ಬಗ್ಗೆ ಚರ್ಚಿಸಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ತೀರ್ಮಾನಿಸಲಾಯಿತು. ಸಭೆಯಲ್ಲಿ ಜಿ.ಪಂ. ಸದಸ್ಯ ಪಿ. ಧರಣೇಂದ್ರ ಕುಮಾರ್, ವೇಣೂರು ತಾ.ಪಂ. ಸದಸ್ಯ ಕೆ. ವಿಜಯ ಗೌಡ, ಪಂಚಾಯತ್ ಉಪಾಧ್ಯಕ್ಷ ಅರುಣ್ ಕ್ರಾಸ್ತ, ಸದಸ್ಯರಾದ ಲೋಕಯ್ಯ ಪೂಜಾರಿ, ಸತೀಶ್ ಹೆಗ್ಡೆ, ರೊನಾಲ್ಡ್ ಡಿಸೋಜ, ರಾಜೇಶ್ ಪೂಜಾರಿ, ನೇಮಯ್ಯ ಕುಲಾಲ್, ಹರೀಶ್ ಪಿ.ಎಸ್., ಯಶೋಧರ ಹೆಗ್ಡೆ, ಲಕ್ಷ್ಮಣ ಪೂಜಾರಿ ಉಪಸ್ಥಿತರಿದ್ದರು.

ವಿವೇಕಾನಂದ ಸೇವಾ ಟ್ರಸ್ಟ್‍ನ ಯಂ. ವಿಜಯರಾಜ ಅಧಿಕಾರಿ, ನೀರು ಮತ್ತು ನೈರ್ಮಲ್ಯ ಸಮಿತಿಯ ಸದಸ್ಯ ಅನೂಪ್ ಜೆ. ಪಾಯಸ್, ಸಿ.ಎ. ಬ್ಯಾಂಕ್ ನಿರ್ದೇಶಕ ಸುಧೀರ್ ಭಂಡಾರಿ, ಲಯನ್ಸ್ ಕ್ಲಬ್ ಅಧ್ಯಕ್ಷ ನವೀನ್ ಪಚ್ಚೇರಿ, ಗುರುಚೈತನ್ಯ ಸೇವಾ ಟ್ರಸ್ಟ್‍ನ ಹೊನ್ನಯ್ಯ ಕಾಟಿಪಳ್ಳ, ಪ್ರಮುಖರಾದ ಪ್ರವೀಣ್ ಕುಮಾರ್ ಇಂದ್ರ, ಜಯರಾಜ್ ಅವರು ಸಲಹೆ ಸೂಚನೆ ನೀಡಿದರು. ಪಿಡಿಓ ಕೆ. ವೆಂಕಟಕೃಷ್ಣರಾಜ ಸ್ವಾಗತಿಸಿ, ಕಾರ್ಯದರ್ಶಿ ವನಜ ವಂದಿಸಿದರು. ಪಂಚಾಯತ್ ಸಿಬ್ಬಂದಿ ನಾರ್ಣಪ್ಪ ಗೌಡ ಸಹಕರಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.