ಮಂಗಳೂರು ಸೀಲ್‍ಡೌನ್ ಎಂಬುದು ಕೇವಲ ವದಂತಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೀಲ್‍ಡೌನ್ ಹೇರಿಲ್ಲ ವಾರ್ತಾ ಇಲಾಖೆ ಸ್ಪಷ್ಟನೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲಾಕ್‍ಡೌನ್ ಮಾತ್ರವಲ್ಲದೇ, ಮಂಗಳೂರು ನಗರದಲ್ಲಿ ಸೀಲ್‍ಡೌನ್ ಮಾಡಲಾಗಿದೆ ಎಂದು ಹಲವು ಖಾಸಗಿ ವಾಹಿನಿಗಳಲ್ಲಿ ಪ್ರಸಾರವಾಗುತ್ತಿರುವುದು ನಿರಾಧಾರ, ವದಂತಿ ಸುದ್ದಿ ಎಂದು ವಾರ್ತಾ ಇಲಾಖೆ ಹಾಗೂ ಜಿಲ್ಲಾಡಳಿತ ಸ್ಪಷ್ಟನೆ ನೀಡಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಾಗಲಿ, ಮಂಗಳೂರು ನಗರದಲ್ಲಾಗಲಿ ಯಾವುದೇ ಸೀಲ್ ಡೌನ್ ಪ್ರಕ್ರಿಯೆ ನಡೆದಿಲ್ಲ. ಈಗಾಗಲೇ ಕಳೆದ ಕೆಲವು ದಿನಗಳಿಂದ ಲಾಕ್‍ಡೌನ್ ಪ್ರಕ್ರಿಯೆ ಜಾರಿಯಲ್ಲಿದೆ. ಇದನ್ನೇ ಕಟ್ಟುನಿಟ್ಟಾಗಿ ಜಾರಿಗೆ ತರಲಾಗುತ್ತಿದೆ ಎಂದು ವಾರ್ತಾ ಇಲಾಖೆ ಹೇಳಿದೆ. ವದಂತಿ, ಆಧಾರ ರಹಿತ ಸುದ್ದಿಗಳ ಪ್ರಸಾರದಿಂದ ಸಾರ್ವಜನಿಕರಲ್ಲಿ ಆತಂಕ, ಗೊಂದಲ ಮೂಡಿಸುತ್ತಿದೆ. ಜಿಲ್ಲೆಯಲ್ಲಿ ಲಾಕ್ ಡೌನ್ ಮಾತ್ರ ಜಾರಿಯಲ್ಲಿದೆ ಎಂದು ಜಿಲ್ಲಾಡಳಿತವೂ ಸ್ಪಷ್ಟನೆ ನೀಡಿದೆ.

ರಾಜ್ಯದ ಹಲವು ವಾಹಿನಿಗಳಲ್ಲಿ ಶುಕ್ರವಾರದಿಂದ ನಗರದ ಬಂಟ್ಸ್ ಹಾಸ್ಟೆಲ್ ಮುಂತಾದೆಡೆ ಸೀಲ್ ಡೌನ್ ಮಾಡಲಾಗಿದೆ ಎಂಬ ವರದಿ ಪ್ರಸಾರವಾಗಿತ್ತು. ಈ ಹಿನ್ನಲೆಯಲ್ಲಿ ಸ್ಪಷ್ಟನೆ ನೀಡಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.