ಸೌತಡ್ಕ ಶ್ರೀಮಹಾಗಣಪತಿ ದೇವಸ್ಥಾನ, ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಹರೀಶ್ಚಂದ್ರ ನಿಧನ


ಬೆಳ್ತಂಗಡಿ: ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನ, ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನ ಮತ್ತು ಪನೋಳಿಬೈಲು ದೇವಸ್ಥಾನದ ಮುಖ್ಯಕಾರ್ಯನಿರ್ವಾಹಣಾಧಿಕಾರಿಯಾಗಿದ್ದ ಹರೀಶ್ಚಂದ್ರ ಅವರು ಎ.14ರಂದು ಮಂಗಳೂರಿನ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. 

ಸವಣೂರು ಕುಂಜಾಡಿ ನಿವಾಸಿಯಾಗಿರುವ ಹರಿಶ್ಚಂದ್ರ ಅವರು ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದಲ್ಲೂ ಕಾರ್ಯನಿರ್ವಹಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು, ಈ ಹಿಂದೆ ಪುತ್ತೂರು ಉಪವಿಭಾಗದ ದೇವಸ್ಥಾನಗಳ ಆಡಳಿತ ಪರಿವೀಕ್ಷಣಾಧಿಕಾರಿಯಾಗಿಯೂ ಕರ್ತವ್ಯ ನಿರ್ವಹಿಸಿದ್ದರು. ಪ್ರಸ್ತುತ ಅವರು ಉಪ್ಪಿನಂಗಡಿ ಮತ್ತು ಸೌತಡ್ಕ ದೇವಸ್ಥಾನದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.