ಕೊರೊನಾ ವೈರಸ್ ಬಗ್ಗೆ ಮುಂಜಾಗ್ರತೆ ಇರಲಿ: ಶಾಸಕ ಹರೀಶ್ ಪೂಂಜ

ಶಾಸಕರಿಂದ ನಾರಾವಿ, ಅಂಡಿಂಜೆ, ಅಳದಂಗಡಿ, ಸುಲ್ಕೇರಿ ಗ್ರಾ.ಪಂ. ವ್ಯಾಪ್ತಿಗಳಲ್ಲಿ ಕಾರ್ಯಪಡೆ ಸಭೆ

ನಾರಾವಿ: ಕೋವಿಡ್-19 (ಕೊರೊನಾ) ವೈರಸ್ ಹರಡದಂತೆ ತಡೆಯಲು ನಾರಾವಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಶಾಸಕ ಹರೀಶ್ ಪೂಂಜ ಅವರು ಸಲಹೆ ಸೂಚನೆ ನೀಡಿದರು.

ನಾರಾವಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಎ.15 ರಂದು ಗ್ರಾ.ಪಂ. ಅಧ್ಯಕ್ಷ ರವೀಂದ್ರ ಪೂಜಾರಿ ಅವರ ನೇತೃತ್ವದಲ್ಲಿ ಕಾರ್ಯಪಡೆ (ಟಾಸ್ಕ್‍ಪೋರ್ಸ್) ಸಭೆ ನಡೆಯಿತು. ಶಾಸಕ ಹರೀಶ್ ಪೂಂಜ ಅವರು ಗ್ರಾ.ಪಂ ವ್ಯಾಪ್ತಿಯಲ್ಲಿ ಈಗಾಗಲೇ ಮುಂಜಾಗ್ರತಾ ಕ್ರಮ ವಹಿಸಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಸಭೆಯಲ್ಲಿ ಗ್ರಾ.ಪಂ ಉಪಾಧ್ಯಕ್ಷೆ ಯಶೋಧಾ, ಅಂಡಿಂಜೆ ತಾ.ಪಂ ಕ್ಷೇತ್ರದ ಸದಸ್ಯ ಸುಧೀರ್ ಸುವರ್ಣ, ಗ್ರಾ.ಪಂ ಸದಸ್ಯ ಉದಯ ಹೆಗ್ಡೆ, ಕೃಷ್ಣಪ್ಪ ಪೂಜಾರಿ, ರಾಜವರ್ಮ ಜೈನ್, ಸಂತೋಷ್ , ಸುಜಲತಾ, ಪ್ರಮೀಳಾ ಭಟ್, ಕು.ಗಿರಿಜಾ, ಎಲಿಜಾ ಫೆರ್ನಾಂಡಿಸ್, ವಸಂತಿ ಮತ್ತು ಬೆಳ್ತಂಗಡಿ ತಾ.ಪಂ ಕಾರ್ಯನಿರ್ವಾಹಣಾಧಿಕಾರಿ ಜಯರಾಮ್, ನಾ.ಪ್ರಾ.ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ದೀಕ್ಷಿತಾ ಮತ್ತು ಗ್ರಾಮ ಕರಣಿಕ ಮಹೇಶ್, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು. ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ರವಿ ಎಸ್ ಎಂ ಸಭೆಯ ನಿರ್ವಹಿಸಿದರು.

ಅಂಡಿಂಜೆ ಗ್ರಾ.ಪಂ.ನಲ್ಲಿ ಟಾಸ್ಕ್‍ಫೋರ್ಸ್ ಸಭೆ:
ಅಂಡಿಂಜೆ ಗ್ರಾಮ ಪಂಚಾಯತ್‍ನಲ್ಲಿ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಎ.15ರಂದು ನಡೆದ ಟಾಸ್ಕ್‍ಫೋರ್ಸ್ ಸಮಾಲೋಚನಾ ಸಭೆಯು ಭಜನಾ ಮಂಡಳಿಯ ಸಭಾಂಗಣದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಗ್ರಾ.ಪಂ. ಅಧ್ಯಕ್ಷ ಮೋಹನ್ ಅಂಡಿಂಜೆ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ಜಿ, ಕಾರ್ಯದರ್ಶಿ ನಿರ್ಮಲ ಕುಮಾರ್, ಪಂಚಾಯತ್ ಸದಸ್ಯರು, ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

ಅಳದಂಗಡಿ, ಸುಲ್ಕೇರಿ ಸಮಾಲೋಚನಾ ಸಭೆ:
ಅಳದಂಗಡಿಯ ಗ್ರಾಮ ಪಂಚಾಯತ್ ಸಭಾಭವನದÀಲ್ಲಿ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಎ.15ರಂದು ನಡೆದ ಟಾಸ್ಕ್‍ಫೋರ್ಸ್ ಸಮಾಲೋಚನಾ ಸಭೆ ನಡೆಯಿತು. ಈ ಸಂದರ್ಭದಲ್ಲಿ ಗ್ರಾ.ಪಂ. ಅಧ್ಯಕ್ಷ ಸತೀಶ್ ಮಿತ್ತಮಾರ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಇಮ್ತಿಯಾಜ್, ಪಂಚಾಯತ್ ಸದಸ್ಯರು, ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

ಸುಲ್ಕೇರಿ ಗ್ರಾಮ ಪಂಚಾಯತ್‍ನಲ್ಲಿ ನಡೆದ ಟಾಸ್ಕ್‍ಫೋರ್ಸ್ ಸಮಾಲೋಚನಾ ಸಭೆಯಲ್ಲಿ ಶಾಸಕ ಹರೀಶ್ ಪೂಂಜ, ಗ್ರಾಮ ಪಂಚಾಯತ್ ಅಧ್ಯಕ್ಷೆ ಯಶೋಧಾ, ಉಪಾಧ್ಯಕ್ಷೆ ಲಲಿತಾ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವಿ ನಿಂ. ಬನಪ್ಪ ಗೌಡ್ರ ಮುಂತಾದವರು ಉಪಸ್ಥಿತರಿದ್ದರು.

ಹೊಸಂಗಡಿಯಲ್ಲಿ ಕಾರ್ಯಪಡೆ ಸಭೆ:
ಹೊಸಂಗಡಿ ಗ್ರಾಮ ಪಂಚಾಯತ್‍ನಲ್ಲಿ ನಡೆದ ಟಾಸ್ಕ್ ಫೋರ್ಸ್ ಸಮಾಲೋಚನಾ ಸಭೆಯಲ್ಲಿ ಶಾಸಕ ಹರೀಶ್ ಪೂಂಜ, ಅಂಡಿಂಜೆ ತಾ.ಪಂ.ಸದಸ್ಯ ಸುಧೀರ್ ಸುವರ್ಣ, ಗ್ರಾಮ ಪಂಚಾಯತ್ ಅಧ್ಯಕ್ಷೆ ಹೇಮಾ ವಸಂತ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಣೇಶ್, ಆಶಾ ಕಾರ್ಯಕರ್ತೆಯರು, ಸಿಬ್ಬಂದಿಗಳು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.