ಕಳೆಂಜ ಗ್ರಾ.ಪಂ.ನಲ್ಲಿ ಕಾರ್ಯಪಡೆ ಸಭೆ

ಕಳೆಂಜ: ಕೊರೊನಾ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ವಹಿಸುವಂತೆ ಕಳೆಂಜ ಗ್ರಾಮ ಪಂಚಾಯತ್‍ನಲ್ಲಿ ಕಾರ್ಯಪಡೆ(ಟಾಸ್ಕ್ ಫೋರ್ಸ್) ಸಭೆ ನಡೆಯಿತು.

ಗ್ರಾಮ ಪಂಚಾಯತ್ ಕಚೇರಿಯಲ್ಲಿ ಗ್ರಾ.ಪಂ.ಅಧ್ಯಕ್ಷೆ ಶಾರದಾ ಅವರ ಅಧ್ಯಕ್ಷತೆಯಲ್ಲಿ ಎ.17ರಂದು ಕೊರೊನಾ ಟಾಸ್ಕ್ ಫೋರ್ಸ್ ಕಾರ್ಯಪಡೆ ಸಭೆಯಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೊರೊನಾ ವೈರಸ್ ಬಾರದಂತೆ ಮುಂಜಾಗ್ರತೆ ವಹಿಸಬೇಕು ಎಂದು ಸೂಚಿಸಲಾಯಿತು.

ಈ ಸಭೆಯಲ್ಲಿ ಪಂಚಾಯತ್ ಅಧ್ಯಕ್ಷರು, ಸದಸ್ಯರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಆರೋಗ್ಯ ಕಾರ್ಯಕರ್ತೆಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.