ನಾಳೆಯಿಂದ ಬೀಡಿ ಉದ್ಯಮ ಮತ್ತೆ ಆರಂಭ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀ ನಿವಾಸ ಪೂಜಾರಿ ಹೇಳಿಕೆ

Advt_NewsUnder_1
Advt_NewsUnder_1
Advt_NewsUnder_1

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸೋಮವಾರದಿಂದ (ಏ.20) ಬೀಡಿ ಉದ್ಯಮ ಮತ್ತೆ ಆರಂಭಿಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1.90 ಲಕ್ಷ, ಉಡುಪಿಯಲ್ಲಿ 21 ಸಾವಿರ ಬೀಡಿ ಕಾರ್ಮಿಕರಿದ್ದಾರೆ. ಕೊರೊನಾ ಹಿನ್ನೆಲೆ ಬೀಡಿ ಉದ್ಯಮ ಸಂಪೂರ್ಣ ಸ್ಥಗಿತಗೊಂಡಿದ್ದು, ಕಾರ್ಮಿಕರಿಗೆ ಆರ್ಥಿಕ ಸಂಕಷ್ಟ ಎದುರಾಗಿ ಜೀವನಾಧಾರಕ್ಕೆ ಸಮಸ್ಯೆಯಾಗಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಸೋಮವಾರದಿಂದ ಬೀಡಿ ಉದ್ಯಮ ಆರಂಭಿಸಲಾಗುವುದು ಎಂದು ಹೇಳಿದರು.

ಕಾರ್ಮಿಕರಿಗೆ ಶೇಕಡಾ 50 ರಷ್ಟು ಕೆಲಸ ನೀಡಲು ಮಾಲೀಕರು ಒಪ್ಪಿಕೊಂಡಿದ್ದಾರೆ. ಕಾರ್ಮಿಕರಿಗೆ ಪ್ರತಿ ವರ್ಷ ಅಷ್ಟಮಿ ಅಥವಾ ಚೌತಿ ಸಂದರ್ಭದಲ್ಲಿ ಬೋನಸ್ ನೀಡಲಾಗುತ್ತಿತ್ತು. ಈ ಬಾರಿ ಮುಂಚೆಯೇ ನೀಡುವಂತೆ ಮಾಲೀಕರನ್ನು ಕೋರಲಾಗಿದೆ. ಇದರ ಬಗ್ಗೆ ಶೀಘ್ರದಲ್ಲೇ ತೀರ್ಮಾನ ಕೈಗೊಳ್ಳುವುದಾಗಿ ಮಾಲೀಕರು ತಿಳಿಸಿದ್ದಾರೆ. 15 ದಿನಗಳ ನಂತರ ಮತ್ತೆ ಸಭೆ ಸೇರಿ, ಬೀಡಿ ಉದ್ಯಮ ಪ್ರಗತಿ ಬಗ್ಗೆ ಪರಿಶೀಲಿಸಲಾಗುವುದು ಎಂದು ಸಚಿವರು ಹೇಳಿದರು.

ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲು, ಶಾಸಕ ವೇದವ್ಯಾಸ ಕಾಮತ್, ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್, ಅಪರ ಜಿಲ್ಲಾಧಿಕಾರಿ ರೂಪಾ, ನಗರಾಭಿವೃದ್ಧಿ ಯೋಜನಾ ನಿರ್ದೇಶಕಿ ಗಾಯತ್ರಿ ನಾಯಕ್ ಇದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.