ದೇಶದಲ್ಲಿ ಮೇ 3ರ ಬಳಿಕವೂ ಲಾಕ್‍ಡೌನ್ ವಿಸ್ತರಣೆ ಸಾಧ್ಯತೆ

Advt_NewsUnder_1
Advt_NewsUnder_1
Advt_NewsUnder_1
  • ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ಪ್ರಧಾನಿ ಮೋದಿ ಸುಳಿವು

ನವದೆಹಲಿ: ಕೊರೊನಾ ವೈರಸ್ ಸೋಂಕು ತೀವ್ರವಾಗಿರುವ ಭಾಗಗಳಲ್ಲಿ ಮೇ 3ರ ನಂತರವೂ ಲಾಕ್‍ಡೌನ್ ಮುಂದುವರಿಸುವ ಸುಳಿವು ನೀಡುವುದರ ಜತೆಗೆ ಹಾಟ್‍ಸ್ಪಾಟ್ ಪ್ರದೇಶಗಳಲ್ಲಿ ಇನ್ನಷ್ಟು ಕಟ್ಟುನಿಟ್ಟಾಗಿ ಲಾಕ್‍ಡೌನ್ ಜಾರಿಗೊಳಿಸಲು ಪ್ರಧಾನಿ ನರೇಂದ್ರ ಮೋದಿ ಸೂಚನೆ ನೀಡಿದ್ದಾರೆ.

ದೇಶದಲ್ಲಿನ ಕೊರೊನಾ ವೈರಸ್ ಪರಿಸ್ಥಿತಿ, ಲಾಕ್‍ಡೌನ್ ಸ್ಥಿತಿಗತಿ ಬಗ್ಗೆ ಚರ್ಚಿಸಲು ಎ.27ರಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಕರೆದಿದ್ದ ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಮಾತನಾಡಿ ಮುಂದಿನ ದಿನಗಳಲ್ಲಿ ಮಾಸ್ಕ್‍ಗಳು ಹಾಗೂ ಮುಖಕ್ಕೆ ಹಾಕುವ ಕವರುಗಳು ಜೀವನದ ಭಾಗವಾಗುತ್ತವೆ. ತಮ್ಮ ತಮ್ಮ ರಾಜ್ಯಗಳ ಜಿಲ್ಲೆಗಳಲ್ಲಿ ಕೊರೋನಾ ವೈರಸ್ ನ ಪ್ರಮಾಣದ ಆಧಾರದ ಮೇಲೆ ರೆಡ್, ಆರೆಂಜ್ ಮತ್ತು ಗ್ರೀನ್ ವಲಯಗಳನ್ನಾಗಿ ವಿಂಗಡಿಸಿ ಲಾಕ್‍ಡೌನ್ ನ್ನು ಹಂತಹಂತವಾಗಿ ಸಡಿಲಿಸುವ ಅಥವಾ ತೆಗೆದುಹಾಕುವ ಬಗ್ಗೆ ಯೋಜನೆ ರೂಪಿಸಿ ಎಂದು ಮುಖ್ಯಮಂತ್ರಿಗಳಿಗೆ ಪ್ರಧಾನಿ ಮೋದಿ ಹೇಳಿದ್ದಾರೆ ಎಂದು ತಿಳಿದುಬಂದಿದೆ. ಗ್ರೀನ್ ಮತ್ತು ಆರೆಂಜ್ ವಲಯಗಳಲ್ಲಿ ಆರ್ಥಿಕ ಚಟುವಟಿಕೆಗಳು ತೆರೆಯಲು ಅವಕಾಶ ನೀಡಲಾಗುವುದು ಎಂದು ಪ್ರಧಾನಿ ಸಭೆಯಲ್ಲಿ ಹೇಳಿದ್ದಾರೆ.

ದೇಶದ ಆರ್ಥಿಕ ವಿಚಾರದಲ್ಲಿ ಆತಂಕ, ಭಯಪಡುವ ಅಗತ್ಯವಿಲ್ಲ, ದೇಶದ ಆರ್ಥಿಕ ಸ್ಥಿತಿ ಉತ್ತಮವಾಗಿದೆ. ಕೊರೊನಾ ವೈರಸ್ ತಡೆಗಟ್ಟುವುದೇ ಈ ಸಂದರ್ಭದಲ್ಲಿ ನಮಗೆ ಮುಖ್ಯವಾಗಿದೆ ಎಂದರು. ಸಭೆಯಲ್ಲಿ ಐದು ರಾಜ್ಯಗಳ ಮುಖ್ಯಮಂತ್ರಿಗಳು ಮೇ 3ರ ನಂತರ ಲಾಕ್ ಡೌನ್ ಸಡಿಲಗೊಳಿಸಬೇಕು ಎಂದು ಹೇಳಿದರೆ, ನಾಲ್ವರು ಮುಂದುವರಿಸಬೇಕೆಂದು ಸಲಹೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ನಗರ ಪ್ರದೇಶಗಳಲ್ಲಿ ವಾಣಿಜ್ಯ ಚಟುವಟಿಕೆಗಳಿಗೆ ಲಾಕ್ ಡೌನ್ ಮುಗಿದ ನಂತರವೂ ಸಾಮಾಜಿಕ ಅಂತರದೊಂದಿಗೆ ಮಾಸ್ಕ್, ಗ್ಲೌಸ್ ಧರಿಸಿ ಮುಂದುವರಿಸಬೇಕೆಂದು ಕೇಂದ್ರ ಸರ್ಕಾರ ಆದೇಶ ಹೊರಡಿಸುವ ಸಾಧ್ಯತೆಯಿದೆ. ಕೋವಿಡ್-19 ಸೋಂಕಿಗೆ ಕಡಿಮೆ ಪರಿಣಾಮ ಬೀರಿರುವ ಜಿಲ್ಲೆಗಳಲ್ಲಿ ಲಾಕ್ ಡೌನ್ ಗೆ ವಿನಾಯ್ತಿ ನೀಡುವ ಸಾಧ್ಯತೆಯಿದೆ. ಸಭೆಯಲ್ಲಿ ರಾಜ್ಯಗಳ ಮುಖ್ಯಮಂತ್ರಿಗಳು ಕೇಂದ್ರದಿಂದ ಹಣಕಾಸು ಪ್ಯಾಕೇಜ್ ಬಿಡುಗಡೆಗೆ ಒತ್ತಾಯಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.