ನಿತ್ಯೋತ್ಸವ ಕವಿ ನಿಸಾರ್ ಅಹಮದ್ ನಿಧನ

Advt_NewsUnder_1
Advt_NewsUnder_1
Advt_NewsUnder_1

ಬೆಂಗಳೂರು: ನಿತ್ಯೋತ್ಸವ ಕವಿ ನಿಸಾರ್ ಅಹಮದ್ (84) ಪದ್ಮನಾಭಗರದಲ್ಲಿರುವ ಸ್ವಗೃಹದಲ್ಲಿ ಭಾನುವಾರ ನಿಧನರಾದರು. ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಕೆಲ ಸಮಯ ಆಸ್ಪತ್ರೆಗೂ ದಾಖಲಾಗಿದ್ದರು. ಅಮೆರಿಕದಲ್ಲಿದ್ದ ಅವರ ಪುತ್ರ ಈಚೆಗಷ್ಟೇ ಮೃತಪಟ್ಟಿದ್ದರು.

ನಿತ್ಯೋತ್ಸವ ಕವಿ

‘ಜೋಗದ ಸಿರಿ ಬೆಳಕಿನಲ್ಲಿ…’ ನಿಸಾರ್ ಅಹಮದ್ ಅವರ ಜನಪ್ರಿಯ ಕೃತಿ. ಮನೆಮನೆ ತಲುಪಿದ ಈ ಕೃತಿ ಅವರಿಗೆ ಸಾಕಷ್ಟು ಜನಮನ್ನಣೆಯನ್ನೂ ತಂದುಕೊಟ್ಟಿತ್ತು. ಜನರು ಅವರನ್ನು ಪ್ರೀತಿಯಿಂದ ನಿತ್ಯೋತ್ಸವ ಕವಿ ನಿಸಾರ್ ಅಹಮದ್ ಎಂದೇ ಗುರುತಿಸಿದರು.

ಪ್ರೊ.ಕೆ.ಎಸ್.ನಿಸಾರ್ ಅಹಮದ್ ಅವರ ಪೂರ್ಣ ಹೆಸರು ಕೊಕ್ಕರೆ ಹೊಸಳ್ಳಿ ಶೇಖ್ ಹೈದರ ನಿಸಾರ್ ಅಹಮದ್. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯಲ್ಲಿ ಫೆಬ್ರುವರಿ 5, 1936ರಲ್ಲಿ ಜನಿಸಿದರು. 1959ರಲ್ಲಿ ಭೂ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆದರು. 1994ರವರೆಗೆ ವಿವಿಧ ಸರ್ಕಾರಿ ಕಾಲೇಜುಗಳಲ್ಲಿ ಅಧ್ಯಾಪಕ ಹಾಗೂ ಪ್ರಾಧ್ಯಾಪಕರಾಗಿ ಕೆಲಸ ಮಾಡಿ ನಿವೃತ್ತರಾದರು.

10 ವರ್ಷದವರಿದ್ದಾಗಲೇ ‘ಜಲಪಾತ’ದ ಬಗ್ಗೆ ಬರೆದ ಕವನ ಕೈಬರಹದ ಪತ್ರಿಕೆಯಲ್ಲಿ ಅಚ್ಚಾಗಿತ್ತು. 21 ಕವನ ಸಂಕಲನಗಳು, 14 ವೈಚಾರಿಕ ಕೃತಿಗಳು, 5 ಮಕ್ಕಳ ಸಾಹಿತ್ಯ ಕೃತಿಗಳು, 5 ಅನುವಾದ ಕೃತಿಗಳು, 13 ಸಂಪಾದನಾ ಗ್ರಂಥಗಳು ಪ್ರಕಟವಾಗಿವೆ.

ಅವುಗಳಲ್ಲಿ ಮನಸು ಗಾಂಧಿಬಜಾರು, ನಿತ್ಯೋತ್ಸವ ಹಾಗೂ ಕುರಿಗಳು ಸಾರ್ ಕುರಿಗಳು ಪ್ರಸಿದ್ಧವಾಗಿವೆ.

1978ರಲ್ಲಿ ನಿಸಾರ್ ಅವರ ಮೊದಲ ಕ್ಯಾಸೆಟ್ ‘ನಿತ್ಯೋತ್ಸವ’ ಹೊರಬಂತು. ಸುಗಮ ಸಂಗೀತ ಕ್ಷೇತ್ರದಲ್ಲಿ ಅವರ ರಚನೆಯ ಗೀತೆಗಳು ಯಶಸ್ಸು ಪಡೆಯಿತು. ನಿಸಾರ್ ರಚನೆಯ ಕವನಗಳನ್ನು ಹೊತ್ತು 13 ಆಡಿಯೊ ಆಲ್ಬಂಗಳು ಪ್ರಕಟವಾಗಿವೆ

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.