ಶ್ರೀ ಗುರುನಾರಾಯಣ ಸೇವಾ ಸಂಘದಿಂದ 2000 ಕುಟುಂಬಗಳಿಗೆ ರೂ 7.5 ಲಕ್ಷ ಮೌಲ್ಯದ ಕಿಟ್ ವಿತರಣೆ

ಬೆಳ್ತಂಗಡಿ: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ ವತಿಯಿಂದ ಬೆಳ್ತಂಗಡಿ ತಾಲೂಕಿನ 7 ಜಿಲ್ಲಾ ಪಂಚಾಯತ್, ಮತ್ತು ನಗರ ಪಂಚಾಯತ್ ವ್ಯಾಪ್ತಿಯ ಸುಮಾರು 2000 ಅರ್ಹ ಬಡ ಕುಟುಂಬಗಳಿಗೆ ರೂ 7.50 ಲಕ್ಷ ಮೌಲ್ಯದ ಆಹಾರ ಕಿಟ್‌ಗಳನ್ನು ಮೇ.13 ರಂದು ಬೆಳ್ತಂಗಡಿ ಸಂಘದದಲ್ಲಿ ವಿತರಿಸುವ ಮೂಲಕ ಚಾಲನೆ ನೀಡಲಾಯಿತು. 

ಸಂಘದ ಗೌರವಾಧ್ಯಕ್ಷ ಮಾಜಿ ಶಾಸಕ ಕೆ ವಸಂತ ಬಂಗೇರ ಕಿಟ್ ವಿತರಣೆಗೆ ಚಾಲನೆ ನೀಡಿದರು. ಸಂಘದ ಅಧ್ಯಕ್ಷ ಎನ್ ಪದ್ಮನಾಭ ಮಾಣಿಂಜ ಅಧ್ಯಕ್ಷತೆ ವಹಿಸಿದ್ದರು. ಯುವ ಬಿಲ್ಲವ ವೇದಿಕೆಯ ಸ್ಥಾಪಕಾಧ್ಯಕ್ಷ ವಿಧಾನ ಪರಿಷತ್ ಶಾಸಕ ಕೆ ಹರೀಶ್ ಕುಮಾರ್, ಮಾಜಿ ಶಾಸಕ ಕೆ ಪ್ರಭಾಕರ ಬಂಗೇರ, ಸಂಘದ ಮಾಜಿ ಅಧ್ಯಕ್ಷರುಗಳಾದ ನಿವೃತ್ತ ಎಸ್.ಪಿ ಪೀತಾಂಬರ ಹೇರಾಜೆ, ಭಗೀರಥ ಜಿ, ಯುವ ಬಿಲ್ಲವ ವೇದಿಕೆಯ ಮಾಜಿ ಅಧ್ಯಕ್ಷರಾದ ಕೆ. ಶೈಲೇಶ್ ಕುಮಾರ್ ಕುರ್ತೋಡಿ, ಸಂತೋಷ್ ಕುಮಾರ್ ಕಾಪಿನಡ್ಕ, ಸಂಘದ ಉಪಾಧ್ಯಕ್ಷ ಮನೋಹರ ಇಳಂತಿಲ, ಕೋಶಾಧಿಕಾರಿ ಚಿದಾನಂದ ಎಲ್ದಕ್ಕ, ಪ್ರಧಾನ ಕಾರ್ಯದರ್ಶಿ ನಾರಾಯಣ ಸುವರ್ಣ, ಯುವ ಬಿಲ್ಲವ ವೇದಿಕೆಯ ಅಧ್ಯಕ್ಷ ರಂಜಿತ್ ಹೆಚ್ ಡಿ, ವಾಹನ ನಿರೀಕ್ಷಕ ಕೆ ಚರಣ್ ಕುಮಾರ್, ಸಂಘದ ನಿರ್ದೇಶಕರುಗಳು, ಗ್ರಾಮ ಸಮಿತಿಗಳ ಪದಾಧಿಕಾರಿಗಳು ಹಾಜರಿದ್ದರು.

ಬಳಿಕ 7 ಜಿಲ್ಲಾ ಪಂಚಾಯತ್ ವ್ಯಾಪ್ತಿಯ ವಿವಿಧ ವಾಹನಗಳಲ್ಲಿ ಆಹಾರ ಸಾಮಾಗ್ರಿಗಳನ್ನು ವಿತರಿಸಲು ಕಳುಹಿಸಲಾಯಿತು. ಈ ಸಂದರ್ಭದಲ್ಲಿ ಕಿಟ್ ತಯಾರಿಕೆಗೆ ಸಹಕರಿಸಿದ ವಿನಾಯಕ ರೈಸ್ ಮಿಲ್‌ನ ಏಕನಾಥ ಬಾಳಿಗ ರವನ್ನು ಗೌರವಿಸಲಾಯಿತು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.