ಫಸ್ಟ್ ನ್ಯೂರೋ ಆಸ್ಪತ್ರೆ ಸಂಪರ್ಕದಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಬ್ಬರಿಗೆ ಕೋವಿಡ್-19 ಸೋಂಕು ದೃಢ

ಬೆಳ್ತಂಗಡಿ: ಕೊರೊನಾ ವೈರಸ್‍ನ ಕೇಂದ್ರವಾಗಿರುವ ಮಂಗಳೂರಿನ ಪಡೀಲು ಬಳಿಯ ಫಸ್ಟ್ ನ್ಯೂರೋ ಆಸ್ಪತ್ರೆಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಮತ್ತೊಂದು ಕೋವಿಡ್-19 ಸೋಂಕು ದೃಢಪಟ್ಟಿದೆ.

ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಮಂಗಳೂರಿನ ಶಕ್ತಿನಗರದ 80 ವರ್ಷದ ವೃದ್ಧೆ ರೋಗಿ ಸಂಖ್ಯೆ 507ನೇ ಸೋಂಕಿತೆಯ ಸಂಪರ್ಕದಿಂದ ಉಳ್ಳಾಲ ಸೋಮೇಶ್ವರದ 38 ವರ್ಷದ ಮಹಿಳೆಯ ಗಂಟಲ ದ್ರವ ಮಾದರಿಯ ಪರೀಕ್ಷೆಯಲ್ಲಿ ಸೋಂಕು ತಗುಲಿರುವುದು ದೃಢಪಟ್ಟಿದೆ.

ಜಿಲ್ಲೆಯಲ್ಲಿ ಈ ಮೂಲಕ ಸೋಂಕಿತರ ಸಂಖ್ಯೆ 34ಕ್ಕೆ ಏರಿದ್ದು, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 951ಕ್ಕೆ ಏರಿಕೆಯಾಗಿದ್ದು, ಬುಧವಾರದ ಬೆಳಗಿನ ಹೆಲ್ತ್ ಬುಲೆಟಿನ್ ವರದಿಯಲ್ಲಿ 26 ಜನರಿಗೆ ಪಾಸಿಟಿವ್ ವರದಿ ಬಂದಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.