ದುಬೈನಿಂದ ಮಂಗಳೂರಿಗೆ ಬಂದ ಪ್ರಯಾಣಿಕರಲ್ಲಿ ಕೊರೊನಾ ಶಂಕೆ ಸುಮಾರು 15ಕ್ಕೂ ಹೆಚ್ಚು ಪ್ರಯಾಣಿಕರಲ್ಲಿ ಕೊರೊನಾ ಪಾಸಿಟಿವ್ ಆಗುವ ಸಾಧ್ಯತೆ

ಮಂಗಳೂರು: ಕಳೆದೆರಡು ದಿನಗಳ ಹಿಂದೆ ದುಬೈನಿಂದ ಮಂಗಳೂರಿಗೆ ಬಂದ ಪ್ರಯಾಣಿಕರಲ್ಲಿ ಕೊರೊನಾ ಶಂಕೆ ವ್ಯಕ್ತವಾಗಿದೆ. ಸುಮಾರು 15 ಕ್ಕೂ ಹೆಚ್ಚು ಪ್ರಯಾಣಿಕರಲ್ಲಿ ಕೊರೊನಾ ಪಾಸಿಟಿವ್ ಆಗುವ ಸಾದ್ಯತೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ.

ಕರಾವಳಿಗೆ ಪಸ್ಟ್ ನ್ಯೂರೊ ಆಸ್ಪತ್ರೆಯ ಬಳಿಕ ಇದೀಗ ದುಬೈ ಕೂಡ ಕಂಟಕವಾಗಿ ಪರಿಣಮಿಸಿದೆ. ಕೊರೊನಾದಿಂದ ವಿದೇಶದಲ್ಲಿ ಸಿಲುಕಿಕೊಂಡಿದ್ದ 177 ಕರಾವಳಿಗರು ಎರಡು ದಿನಗಳ ಹಿಂದೆಯಷ್ಟೇ ಮಂಗಳೂರಿಗೆ ಆಗಮಿಸಿದ್ದರು. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಎಲ್ಲಾ ಪ್ರಯಾಣಿಕರನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ. ಮೇ 13ರಂದು ಎಲ್ಲಾ ಪ್ರಯಾಣಿಕರ ಗಂಟಲಿನ ದ್ರವರೂಪದ ಮಾದರಿಯನ್ನು ಸಂಗ್ರಹಿಸಲಾಗಿದ್ದು, ಸ್ಯಾಂಪಲನ್ನು ತಪಾಸಣೆಗೆ ರವಾನಿಸಲಾಗಿದೆ. ಇಂದು ಈ ಎಲ್ಲಾ ಪ್ರಯಾಣಿಕರ ವರದಿ ಲಭ್ಯವಾಗಲಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.