ಮೇಲ್ಛಾವಣಿಯಿಂದ ಆಯ ತಪ್ಪಿ ಬಿದ್ದು ಕಾರ್ಮಿಕ ಸಾವು: ಇಬ್ಬರಿಗೆ ಗಾಯ

ಧರ್ಮಸ್ಥಳ: ಇಲ್ಲಿನ ಕಾರ್ ಮ್ಯೂಸಿಯಂನ ಮೇಲ್ಛಾವಣಿ ಕೆಲಸ ನಡೆಯುತ್ತಿದ್ದ ವೇಳೆ ಆಯ ತಪ್ಪಿ ಬಿದ್ದ ಮೂವರು ಕಾರ್ಮಿಕರ ಪೈಕಿ ಓರ್ವ ಮೃತಪಟ್ಟಿದ್ದಾರೆ. ಮೃತರು ಕಾರವಾರದ ಸಂಜೀವ ಎಂಬವರಾಗಿದ್ದಾರೆ.

ಘಟನೆಯಿಂದ ಇನ್ನಿಬ್ಬರು ಗಾಯಗೊಂಡಿದ್ದು ಅವರನ್ನು ಚಿಕಿತ್ಸೆಗಾಗಿ ಉಜಿರೆ ಎಸ್‌ಡಿಎಂ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿವಿರ ತಿಳಿಯುತ್ತಿದ್ದಂತೆ ತಕ್ಷಣ ಸ್ಥಳಕ್ಕೆ ಧಾವಿಸಿದ ಧರ್ಮಸ್ಥಳ ಠಾಣಾ ಸಬ್ ಇನ್ಸ್‌ಪೆಕ್ಟರ್ ಪವನ್ ಕುಮಾರ್ ಅವರ ತಂಡ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.