ಬಾಳೆಕೋಡಿ ಕ್ಷೇತ್ರದ ಶ್ರೀ ಶಶಿಕಾಂತ ಮಣಿ ಸ್ವಾಮೀಜಿ ಅಸ್ತಂಗತ

ಬೆಳ್ತಂಗಡಿ: ಕೆಲಕಾಲದಿಂದ ಅನಾರೋಗ್ಯಕ್ಕೆ ಒಳಗಾಗಿದ್ದ ಕನ್ಯಾನ ಬಾಳೆಕೋಡಿ ಶಿಲಾಂಜನ ಕಾಳಭೈರವೇಶ್ವರ ಕ್ಷೇತ್ರದ ಶ್ರೀ ಶಶಿಕಾಂತ ಮಣಿ ಸ್ವಾಮೀಜಿ (44ವ) ಸೋಮವಾರ ಮಧ್ಯರಾತ್ರಿ 12 ಗಂಟೆಗೆ ಬಾಳೆಕೋಡಿಯ ನಿವಾಸದಲ್ಲಿ ಅಸ್ತಂಗತರಾಗಿದ್ದಾರೆ.

ಶ್ರೀ ಶಶಿಕಾಂತ ಮಣಿ ಸ್ವಾಮೀಜಿ ಅವರು ಸಾಹಿತ್ಯ ಪ್ರೇಮಿಗಳಾಗಿದ್ದರು. ಇವರಿಗೆ ಜರ್ಮನಿಯ ಅಂತಾರಾಷ್ಟ್ರೀಯ ಪೀಸ್ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪದವಿ ಸೇರಿದಂತೆ ಅನೇಕ ಪ್ರಶಸ್ತಿ ಪುರಸ್ಕಾರಗಳು ಸಂದಿವೆ. ಪಾಣಾರ ಸಮುದಾಯಕ್ಕೆ ಸೇರಿರುವ ಸ್ವಾಮೀಜಿಯವರು ಅನೇಕ ಸಮಾಜ ಸೇವಾ ಕಾರ್ಯಕ್ರಮಗಳನ್ನು ಕೈಗೊಂಡಿದ್ದರು. ಇವರ ಕ್ಷೇತ್ರಕ್ಕೆ ಕರ್ನಾಟಕ ಹಾಗೂ ಕೇರಳ ರಾಜ್ಯದಿಂದ ಹಲವು ಭಕ್ತರು ತಮ್ಮ ಕಷ್ಟಗಳ ನಿವಾರಣೆಗಾಗಿ ಬರುತ್ತಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.