HomePage_Banner_
HomePage_Banner_
HomePage_Banner_

ಮುಂಬೈಯಿಂದ ಆಗಮಿಸಿದ ಬೆಳ್ತಂಗಡಿ ತಾಲೂಕಿನ ಆರಂಬೋಡಿಯ ಮಹಿಳೆಗೆ ಕೊರೊನಾ ಪಾಸಿಟಿವ್ !

Advt_NewsUnder_1
  • ಮಹಾರಾಷ್ಟ್ರದಿಂದ ನಾಲ್ಕು ದಿನಗಳ ಹಿಂದೆ ಆಗಮಿಸಿ ಕ್ವಾರಂಟೈನ್ ನಲ್ಲಿದ್ದ ಮಹಿಳೆ

ಬೆಳ್ತಂಗಡಿ: ಮಹಾಮಾರಿ ಕೊರೊನಾ ಸೋಂಕು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ಎರಡನೇ ಪ್ರಕರಣ ಪತ್ತೆಯಾಗಿ ಶುಕ್ರವಾರ ಈ ಮೂಲಕ ತಾಲೂಕಿಗೆ “ಮಹಾ” ಆಘಾತವನ್ನು ನೀಡಿದ್ದು, ತಾಲೂಕಿನ ಆರಂಬೋಡಿಯ 29 ವರ್ಷದ ಯವತಿಗೆ ಕೋವಿಡ್ -19 ಸೋಂಕು ತಗುಲಿರುವುದು ದೃಢಪಟ್ಟಿದೆ.

ಮಹಾರಾಷ್ಟ್ರದ ದೊಂಬಿವಲಿ -ಥಾಣೆ ಮುಂಬಯಿಯಿಂದ ಬೆಳ್ತಂಗಡಿ ತಾಲೂಕಿಗೆ ಆಗಮಿಸಿದ ಸುಮಾರು 29 ವರ್ಷದ ಮಹಿಳೆಯ ಗಂಟಲು ದ್ರವ ಮಾದರಿ ಪರೀಕ್ಷಾ ವರದಿಯಲ್ಲಿ ಕೋವಿಡ್-19 ಸೋಂಕು ಇರುವುದು ದೃಢಪಟ್ಟಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರ ಕಾರ್ಯಾಲಯವು ಪ್ರಕಟಣೆಯಲ್ಲಿ ತಿಳಿಸಿದೆ. 29 ವರ್ಷದ ಯುವತಿ ಸೇರಿದಂತೆ 9 ಮಂದಿ ಮುಂಬೈನಿಂದ ನಾಲ್ಕು ದಿನಗಳ ಹಿಂದೆ ಬಂದಿದ್ದರು. ಎಲ್ಲರೂ ನಾಲ್ಕು ದಿನದಿಂದ ಕ್ವಾರಂಟೈನ್ ನಲ್ಲಿ ಇದ್ದರು.

 

ಈ 29 ವರ್ಷದ ಮಹಿಳೆಯನ್ನು ಬೆಳ್ತಂಗಡಿಯಲ್ಲಿ ಜಿಲ್ಲಾಡಳಿತದ ವತಿಯಿಂದ ಸ್ಥಾಪಿಸಲಾದ ಕ್ವಾರಂಟೈನ್ ಕೇಂದ್ರದಲ್ಲಿ ಇರಿಸಲಾಗಿತ್ತು. ಪಾಸಿಟಿವ್ ಪತ್ತೆಯಾದ ಯುವತಿಯನ್ನು ಮಂಗಳೂರಿನ ವೆನ್ಲಾಕ್ ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಸೂಕ್ತ ಚಿಕಿತ್ಸೆ ನೀಡುವ ಬಗ್ಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪ್ರಕಟಣೆ ತಿಳಿಸಿದೆ.
ಇದರೊಂದಿಗೆ ದ.ಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 62ಕ್ಕೆ ಏರಿಕೆಯಾಗಿದೆ.

ಈ ಮೊದಲು ಬೆಳ್ತಂಗಡಿ ತಾಲೂಕಿನ ಮೊದಲ ಪ್ರಕರಣವಾಗಿ ತಣ್ಣೀರುಪಂಥ ಗ್ರಾ.ಪಂ.ವ್ಯಾಪ್ತಿಯ ವ್ಯಕ್ತಿಗೆ ಕೊರೊನಾ ಸೋಂಕು ತಗುಲಿತ್ತು. ಆ ಬಳಿಕ ನೀಡಿದ ಚಿಕಿತ್ಸೆಯಿಂದ ಗುಣಮುಖರಾಗಿ ಮನೆಗೆ ಮರಳಿದ್ದರು.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.