ಕಂಟೈನ್ಮೆಂಟ್ ವಲಯಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಇಲ್ಲ: ಶಿಕ್ಷಣ ಸಚಿವ ಸುರೇಶ್ ಕುಮಾರ್

ಬೆಂಗಳೂರು: ಕೋವಿಡ್-19 ವೈರಸ್ ತೀವ್ರತೆಯ ವಿಚಾರವಾಗಿ ಕಂಟೈನ್ಮೆಂಟ್ ವಲಯ ಎಂದು ಗುರುತಿಸಿರುವ ಕಡೆಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸುವುದಿಲ್ಲ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದರು.

ಬೆಂಗಳೂರಿನಲ್ಲಿ ಮಾತನಾಡಿದ ಸಚಿವ ಸುರೇಶ್ ಕುಮಾರ್ ಅವರು, ರಾಜ್ಯದ ಯಾವುದೇ ಕಂಟೈನ್ಮೆಂಟ್ ವಲಯಗಳಲ್ಲಿ ಪರೀಕ್ಷೆಗಳನ್ನು ನಡೆಸುವುದಿಲ್ಲ. ಪರೀಕ್ಷೆ ನಡೆಯುವ ಸಮೀಪದ ದಿನಗಳ ಆಸುಪಾಸಿನಲ್ಲಿ ಯಾವುದೇ ವಲಯ ಕಂಟೈನ್ಮೆಂಟ್ ವಲಯವೆಂದು ಘೋಷಿತವಾದರೆ ಅಲ್ಲಿನ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗುತ್ತದೆ. ಪೂರಕ ಪರೀಕ್ಷೆಯಲ್ಲಿ ಪುನರಾವರ್ತಿತ ಅಭ್ಯರ್ಥಿ ಎಂದು ಪರಿಗಣಿಸದೇ, ಹೊಸ ಪರೀಕ್ಷಾ ಅಭ್ಯರ್ಥಿ ಎಂದೇ ಪರಿಗಣಿಸಿ ಅವಕಾಶ ಕಲ್ಪಿಸಲಾಗುವುದು ಎಂದು ಸಚಿವರು ತಿಳಿಸಿದರು.

ಜೂನ್ 25ರಿಂದ ಪರೀಕ್ಷೆ ನಡೆಸಲು ಇಲಾಖೆ ಸಜ್ಜಾಗಿದೆ. ಪರೀಕ್ಷಾ ವೇಳಾಪಟ್ಟಿಯೂ ಬಿಡುಗಡೆಯಾಗಿದೆ. ಎಲ್ಲ ರೀತಿಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸಲಾಗುವುದು ಎಂದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.