HomePage_Banner_
HomePage_Banner_
HomePage_Banner_

ಬೆಳ್ತಂಗಡಿ ತಾಲೂಕಿನ ಶಿರ್ಲಾಲು ಗ್ರಾಮದ ಮಹಿಳೆಗೆ ಕೊರೊನಾ ಸೋಂಕು ದೃಢ * ಶಿರ್ಲಾಲು ಪ್ರದೇಶದ ಏಳು ಮನೆಗಳು ಕಂಟೈನ್ಮೆಂಟ್ ವಲಯ

Advt_NewsUnder_1
  • ಸ್ಥಳಕ್ಕೆ ಶಾಸಕ ಹರೀಶ್ ಪೂಂಜ, ತಹಶೀಲ್ದಾರ್ ಗಣಪತಿ ಶಾಸ್ತ್ರಿ, ಆರೋಗ್ಯಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಬೆಳ್ತಂಗಡಿ: ತಾಲೂಕಿನ ಶಿರ್ಲಾಲು ಗ್ರಾಮದ ನಿವಾಸಿಯಾದ 41 ವರ್ಷದ ಮಹಿಳೆಯೊಬ್ಬರಿಗೆ ಕೋವಿಡ್ -19 ಸೋಂಕು ದೃಢಪಟ್ಟಿದ್ದು, ಈ ಹಿನ್ನೆಲೆಯಲ್ಲಿ ಶಿರ್ಲಾಲಿನ ಮಜಲುಪಲ್ಕೆ ಪ್ರದೇಶದ ಏಳು ಮನೆಗಳನ್ನು ಕಂಟೈನ್ಮೆಂಟ್ ವಲಯವೆಂದು ಗುರುತಿಸಲಾಗಿದೆ.

ಮಹಿಳೆಯು ಶಿರ್ಲಾಲಿನ ಮಜಲುಪಲ್ಕೆಯಿಂದ ಕನ್ಯಾಡಿ-1 ಪಡ್ಪು ಎಂಬಲ್ಲಿಯ ಅವರ ಸಂಬಂಧಿಕರ ಮನೆಗೆ ತೆರಳಿದ್ದು ಈ ಸಂದರ್ಭದಲ್ಲಿ ಸ್ಥಳೀಯರು ತಾಲೂಕು ಆರೋಗ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಬಳಿಕ ಅಲ್ಲಿಗೆ ತೆರಳಿದ ಆರೋಗ್ಯ ಇಲಾಖೆ ಸಿಬ್ಬಂದಿ ಆ ಮನೆಯ ಎಲ್ಲರನ್ನೂ ಕೂಡ ಹೋಮ್ ಕ್ವಾರಂಟೈನ್ ಮಾಡಲಾಗಿದೆ. ಮಹಿಳೆಗೆ ಉಸಿರಾಟದ ಸಮಸ್ಯೆ ಇದ್ದು, ಗ್ರಾಮಸ್ಥರ ಒತ್ತಾಯದ ಕಾರಣದಿಂದ ಈಕೆ ಕೋವಿಡ್-19 ಪರೀಕ್ಷೆ ನಡೆಸಿದ್ದರು ಎನ್ನಲಾಗಿದೆ. ಈಕೆಗೆ ಸೋಂಕು ದೃಢಪಟ್ಟ ಕಾರಣ ಮಹಿಳೆಯನ್ನು ಬೆಳಗ್ಗೆ ಮಂಗಳೂರಿನ ಕೋವಿಡ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಸದ್ಯ ಶಿರ್ಲಾಲು ಗ್ರಾಮದಲ್ಲಿ ಸೀಲ್ ಡೌನ್ ಮಾಡಲು ಜಿಲ್ಲಾಡಳಿತ ಸಿದ್ದತೆ ನಡೆಸಿದೆ ಎನ್ನಲಾಗಿದೆ.

ಔಷಧಕ್ಕಾಗಿ ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ಬಂದಿದ್ದ ಮಹಿಳೆ:
ಶಿರ್ಲಾಲಿನ ಮಹಿಳೆ ಬೆಳಿಗ್ಗೆ ಔಷಧಕ್ಕಾಗಿ ಬೆಳ್ತಂಗಡಿ ತಾಲೂಕು ಸರ್ಕಾರಿ ಆಸ್ಪತ್ರೆಗೆ ಬಂದಿದ್ದು, ಅನಾರೋಗ್ಯದ ಕಾರಣ ನೀಡಿ ಔಷಧ ಪಡೆದು ಆ ಬಳಿಕ ಕನ್ಯಾಡಿಯ ಪಡ್ಪುವಿನಲ್ಲಿರುವ ಅವರ ಮನೆಗೆ ತೆರಳಿದ್ದರು. ಈ ವೇಳೆ ಸರ್ಕಾರಿ ಆಸ್ಪತ್ರೆಯ ವೈದ್ಯರು ಆ ಮಹಿಳೆಯನ್ನು ಪರೀಕ್ಷಿಸಿ ಮಂಗಳೂರು ಆಸ್ಪತ್ರೆಗೆ ಯಾಕೆ ಕಳುಹಿಸಿಲಿಲ್ಲ ಎಂಬುದು ಜನರಲ್ಲಿ ಸಂಶಯಕ್ಕೆ ಕಾರಣವಾಗಿದೆ.

ಶಾಸಕ ಹರೀಶ್ ಪೂಂಜ, ತಹಶೀಲ್ದಾರ್ ಗಣಪತಿ ಶಾಸ್ತ್ರಿ, ಆರೋಗ್ಯಾಧಿಕಾರಿ ಡಾ.ಕಲಾಮಧು, ಅಳದಂಗಡಿ ಆಸ್ಪತ್ರೆ ವೈದ್ಯೆ ಡಾ.ಚೈತ್ರಾ, ವೇಣೂರು ಎಸ್ ಐ ಲೋಲಾಕ್ಷ, ಎಎಸ್ ಐ ಜಯಪೂಜಾರಿ ಪೊಲೀಸ್ ಸಿಬ್ಬಂದಿ ಕೃಷ್ಣ ಸ್ಥಳಕ್ಕೆ ತಾ.ಪಂ. ಸದಸ್ಯ ಜಯಶೀಲಾ, ಪಿಡಿಒ ರಾಜು, ಗಣಪತಿ ಪಂಚಾಯತ್ ಸದಸ್ಯರು, ಆಶಾ ಕಾರ್ಯಕರ್ತೆಯರು ಆಗಮಿಸಿ ಪರಿಶೀಲಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಬೈನಿಂದ ಆಗಮಿಸಿದ ಮತ್ತೊಬ್ಬನಲ್ಲಿ ಕೋವಿಡ್-19 ಸೋಂಕು ಕಾಣಿಸಿಕೊಂಡಿದೆ. ಖಾಸಗಿ ಲ್ಯಾಬ್ ನಲ್ಲಿ ಪರೀಕ್ಷೆ ಮಾಡಿಸಿದ್ದ 30 ವರ್ಷದ ಯುವಕನಿಗೆ ಕೋವಿಡ್19 ಪಾಸಿಟಿವ್ ವರದಿ ಬಂದಿದೆ.

ರಾಜ್ಯದಲ್ಲಿ ಶನಿವಾರ ಕೋವಿಡ್-19 ಮಹಾಸ್ಪೋಟ ಸಂಭವಿಸಿದೆ. ಶುಕ್ರವಾರ ಸಂಜೆಯ ಬಳಿಕ ಶನಿವಾರ ಮಧ್ಯಾಹ್ನದವರೆಗೆ ರಾಜ್ಯದಲ್ಲಿ 196 ಜನರಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢವಾಗಿದೆ.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.