ದಕ್ಷಿಣ ಕನ್ನಡದಲ್ಲಿ ಮೂವರಿಗೆ, ಉಡುಪಿ ಜಿಲ್ಲೆಯಲ್ಲಿ 16 ಮಂದಿಗೆ ಕೊರೊನಾ ಪಾಸಿಟಿವ್ ಬೆಳ್ತಂಗಡಿಯ ಕ್ವಾರಂಟೈನ್ ಕೇಂದ್ರದಲ್ಲಿದ್ದ ಮೂವರಿಗೆ ಕೋವಿಡ್-19 ಸೋಂಕು

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ ಮತ್ತೆ ಮೂವರಿಗೆ ಹಾಗೂ ಉಡುಪಿ ಜಿಲ್ಲೆಯಲ್ಲಿ 16 ಮಂದಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದೆ.

ಇದರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು ಕೋವಿಡ್-19 ಸೋಂಕಿತರ ಸಂಖ್ಯೆ 61ಕ್ಕೆ ಏರಿಕೆಯಾದರೆ, ಉಡುಪಿ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆಯು 92ಕ್ಕೆ ತಲುಪಿದೆ.

ಬೆಳ್ತಂಗಡಿಯ ಕ್ವಾರಂಟೈನ್ ಕೇಂದ್ರದಲ್ಲಿದ್ದ ಮೂವರು:
ದಕ್ಷಿಣ ಕನ್ನಡ ಜಿಲ್ಲೆಯ ಮೂವರು ಸೋಂಕಿತರು ಮಹಾರಾಷ್ಟ್ರದಿಂದ ಬಂದವರಾಗಿದ್ದು, 30, 25, 55 ವರ್ಷದ ಮೂವರು ಪುರುಷರಿಗೆ ಕೋವಿಡ್ -19 ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಮೂವರು ಕೂಡ ಮಹಾರಾಷ್ಟ್ರದ ಮುಂಬಯಿ ಮತ್ತು ಪೂನಾದಿಂದ ಬಂದಿದ್ದರು.

ಈ ಮೂವರನ್ನು ಕೂಡ ಬೆಳ್ತಂಗಡಿಯಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಈ ಮೂವರಲ್ಲಿ ಇಬ್ಬರು ಬೆಳ್ತಂಗಡಿ ತಾಲೂಕಿನ ಆರಂಬೋಡಿ ಕ್ವಾರಂಟೈನ್ ಕೇಂದ್ರದಲ್ಲಿದ್ದರೆ, ಮತ್ತೊಬ್ಬರು ಹೊಕ್ಕಾಡಿಗೋಳಿ ಕ್ವಾರಂಟೈನ್ ಕೇಂದ್ರದಲ್ಲಿದ್ದರು. ಸದ್ಯ ಇವರನ್ನು ಮಂಗಳೂರಿನ ವೆನ್ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ಸ್ಥಳಾಂತರಿಸಲಾಗಿದೆ.

ರಾಜ್ಯದಲ್ಲಿ ಸೋಮವಾರದ ಮಧ್ಯಾಹ್ನದ ಹೆಲ್ತ್ ಬುಲೆಟಿನ್ ವರದಿಯಲ್ಲಿ 69 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದೆ. ಈ ಮೂಲಕ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 2158ಕ್ಕೆ ಏರಿಕೆಯಾಗಿದೆ. ಇದರಲ್ಲಿ 680 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.ಒಟ್ಟು 53 ಜನ ಸೋಂಕಿನ ಕಾರಣದಿಂದ ಸಾವನ್ನಪ್ಪಿದರೆ, ಇಬ್ಬರು ಸೋಂಕಿತರು ಕೋವಿಡ್ ಅಲ್ಲದ ಕಾರಣದಿಂದ ಮರಣ ಹೊಂದಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.