ಕೊರೊನಾ ಸೋಂಕಿನಿಂದ ಮೃತಪಟ್ಟ ವೇಣೂರಿನ ವ್ಯಕ್ತಿಯ ಸಂಪರ್ಕಕ್ಕೆ ಬಂದವರು ಪರೀಕ್ಷಿಸಿಕೊಳ್ಳಿ ವೇಣೂರು ಗ್ರಾ.ಪಂ. ಪ್ರಕಟಣೆಯಲ್ಲಿ ಮನವಿ

ಸಾಂಧರ್ಬಿಕ ಚಿತ್ರ

ಬೆಳ್ತಂಗಡಿ: ವೇಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮೂಡುಕೋಡಿ ಗ್ರಾಮದ ಪಂಜಾಲುಬೈಲು ಮತ್ತು ವೇಣೂರಿನ ಮಹಾವೀರ ನಗರದಲ್ಲಿ ಸಂಚರಿಸಿದ್ದ 40 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಅವರಿಗೆ ಕೋವಿಡ್-19 ಸೋಂಕಿರುವುದು ವರದಿಯಿಂದ ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಮೃತಪಟ್ಟ ವ್ಯಕ್ತಿಯ ಸಂಪರ್ಕಕ್ಕೆ ಬಂದಿರುವವರು ವೇಣೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತಪಾಸಣೆ ಮಾಡಿಸಬೇಕು ಎಂದು ವೇಣೂರು ಗ್ರಾಮ ಪಂಚಾಯತ್ ಪ್ರಕಟಣೆಯಲ್ಲಿ ತಿಳಿಸಿದೆ.

ವೇಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಪ್ರತಿಯೊಬ್ಬರು ಮಾಸ್ಕ್ ಧರಿಸುವುದು ಕಡ್ಡಾಯ ಮತ್ತು ಸಾಮಾಜಿಕ ಅಂತರ ಕಡ್ಡಾಯ ಪಾಲಿಸಬೇಕು. ಮಾಸ್ಕ್ ಧರಿಸದಿದ್ದಲ್ಲಿ ಗ್ರಾಮ ಪಂಚಾಯಿತಿಯಿಂದ ರೂ.100 ದಂಡ ವಿಧಿಸಲಾಗುವುದು.

ಮೃತ ವ್ಯಕ್ತಿಯ ವಾಸ್ತವ್ಯದ ಮನೆ ವ್ಯಾಪ್ತಿಯು ಸೀಲ್‍ಡೌನ್ (ಕಂಟೈನ್‍ಮೆಂಟ್ ವಲಯ) ಆಗಿರುವುದರಿಂದ ಈ ವ್ಯಾಪ್ತಿಯಲ್ಲಿನ ಮನೆಯ ಸುತ್ತಮುತ್ತ ಸಾರ್ವಜನಿಕರು ಸಂಚಾರ ಮತ್ತು ಸಂಪರ್ಕವನ್ನು ನಿಷೇಧಿಸಲಾಗಿದೆ ಎಂದು ಗ್ರಾ.ಪಂ. ಪ್ರಕಟಣೆ ತಿಳಿಸಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.