ಬ್ಲಾಕ್, ಜಿಲ್ಲಾ ಸಮಿತಿಗಳನ್ನು ಶೀಘ್ರ ರಚಿಸಲು ಸಲಹೆ ನೀಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಿಸಾನ್ ಕಾಂಗ್ರೆಸ್ನ ನೂತನ ಅಧ್ಯಕ್ಷ ಮೋಹನ್ ಗೌಡ ಕಲ್ಮಂಜ ಅವರು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಅವರನ್ನು ಮಂಗಳೂರಿನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಭೇಟಿ ಮಾಡಿದರು.
ಈ ವೇಳೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಅವರು ಜಿಲ್ಲಾ ಕಿಸಾನ್ ಕಾಂಗ್ರೆಸ್ನ ನೂತನ ಬ್ಲಾಕ್ ಹಾಗೂ ಜಿಲ್ಲಾ ಸಮಿತಿಗಳನ್ನು ಶೀಘ್ರದಲ್ಲೇ ರಚನೆ ಮಾಡಿ ಪಕ್ಷವನ್ನು ಸದೃಢ ಮಾಡಲು ಕೆಪಿಸಿಸಿ ಸೂಚನೆಯನ್ನು ಪಾಲಿಸಬೇಕು ಎಂದು ಕಾರ್ಯಾಧ್ಯಕ್ಷ ಸಲೀಂ ಅವರು ಜಿಲ್ಲಾ ಕಿಸಾನ್ ಕಾಂಗ್ರೆಸ್ಗೆ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಬಂಟ್ವಾಳ ಪುರಸಭಾ ವಲಯ ಪ್ರಧಾನ ಕಾರ್ಯದರ್ಶಿ ದಯಾನಂದ ನೇರಂಬೋಲ್ ಹಾಗೂ ಸುಳ್ಯ ವಿಧಾನಸಭಾ ಕ್ಷೇತ್ರದ ಮಾಜಿ ಯುವ ಕಾಂಗ್ರೆಸ್ ಅಧ್ಯಕ್ಷ ಯತೀಶ್ ಕಡಬ ಉಪಸ್ಥಿತರಿದ್ದರು.