ಜೂನ್ 30ರ ತನಕ ಲಾಕ್‌ಡೌನ್ ವಿಸ್ತರಣೆ

ದೇಶಾದ್ಯಂತ ಲಾಕ್‌ಡೌನ್ ಮತ್ತೆ ವಿಸ್ತರಣೆಯಾಗಿದೆ. ಜೂ. 30ರ ತನಕ ವಿಸ್ತರಿಸಿ ಕೇಂದ್ರ ಸರಕಾರ ಆದೇಶ ನೀಡಿದೆ.

ಈಗಾಗಲೇ ನಾಲ್ಕನೇ ಹಂತದ ಲಾಕ್ ಡೌನ್ ಅವದಿ ಮೇ 31ರಂದು ಅಂತ್ಯಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಮತ್ತೆ ಲಾಕ್ ಡೌನ್ ವಿಸ್ತರಿಸಿ ಕೇಂದ್ರ ಗೃಹ ಇಲಾಖೆ ಆದೇಶ ನೀಡಿದೆ.

ಇನ್ನು ರಾತ್ರಿ 9ರಿಂದ ಬೆಳಗ್ಗೆ 5ರ ತನಕ ಕರ್ಫ್ಯೂ ಜಾರಿಯಲ್ಲಿರಲಿದೆ. ಸಾರ್ವಜನಿಕ ಸಭೆ ಸಮಾರಂಭಗಳಿಗೆ ನಿರ್ಬಂಧವಿರಲಿದೆ. ಇನ್ನು ಪರಿಸ್ಥಿತಿಯನ್ನು ಅವಲೋಕಿಸಿಕೊಂಡು ರೈಲು ಓಡಾಟದ ಬಗ್ಗೆ ನಿರ್ಧಾರ ಕೈಗೊಳ್ಳುವ ಬಗ್ಗೆ ಗೃಹ ಇಲಾಖೆ ನಿರ್ಧಾರಿಸಿದೆ.

ಇನ್ನು ಈ ನಡುವೆ ಶಾಪಿಂಗ್ ಮಾಲ್, ಹೋಟೆಲ್‌ಗಳು ತೆರೆಯಲು ಅವಕಾಶ ಕಲ್ಪಿಸಲಾಗಿದೆ. ಕಂಟೈನ್ಮೆಂಟ್ ಝೋನ್ ಹೊರತುಪಡಿಸಿದಂತೆ ಉಳಿದೆಲ್ಲ ಪ್ರದೇಶಗಳಲ್ಲಿ ನಿಯಮಗಳು ಸಡಿಲಿಕೆ ಇರಲಿದೆ ಎಂದು ಗೃಹ ಇಲಾಖೆ ತಿಳಿಸಿದೆ. ಅಂತರರಾಷ್ಟ್ರೀಯ ವಿಮಾನ ಹಾರಾಟ, ಮೆಟ್ರೋ ರೈಲಿನ ಕಾರ್ಯಾಚರಣೆ, ಸಿನೆಮಾ ಹಾಲ್‌ಗಳು, ಜಿಮ್, ಈಜುಕೊಳಗಳು, ಇತರೆ ಮನರಂಜನಾ ಸ್ಥಳಗಳನ್ನು ತೆರೆಯುವ ದಿನಾಂಕದ ಬಗ್ಗೆ ಮುಂದಿನ ದಿನಗಳಲ್ಲಿ ಪರಿಸ್ಥಿತಿ ನೋಡಿಕೊಂಡು ನಿರ್ಧರಿಸಲಾಗುತ್ತದೆ ಎಂದು ತಿಳಿಸಿದೆ.

ಜೂನ್ 8ರಿಂದ ಧಾರ್ಮಿಕ ಕೇಂದ್ರಗಳು ಓಪನ್-ಶಾಲಾ ಕಾಲೇಜುಗಳ ಬಗ್ಗೆ ನಿರ್ಣಯವಾಗಿಲ್ಲ

ಜೂನ್ 30ರ ತನಕ ಲಾಕ್ ಡೌನ್ ವಿಸ್ತರಿಸಲಾಗಿದೆ. ಈ ನಡುವೆ, ಧಾರ್ಮಿಕ ಕೇಂದ್ರಗಳು ಸೇರಿದಂತೆ ಮಾಲ್, ಹೋಟೆಲ್ ಗಳು ಪುನರಾರಂಭಿಸಲು ಸೂಚನೆ ನೀಡಿದೆ. ಜೂನ್ 8 ರಿಂದ ಇವುಗಳು ಕಾರ್ಯಾರಂಭಗೊಳ್ಳಲಿವೆ.

ಈ ಸಂಬಂಧ ಕೇಂದ್ರ ಗೃಹ ಸಚಿವಾಲಯ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಮೊದಲನೇ ಹಂತದಲ್ಲಿ ಧಾರ್ಮಿಕ ಕೇಂದ್ರಗಳಿಗೆ ಅವಕಾಶವನ್ನು ಕಲ್ಪಿಸಲಾಗಿದೆ. ಜೂನ್ ೮ರಿಂದ ಎಲ್ಲಾ ಧಾರ್ಮಿಕ ಕೇಂದ್ರಗಳು ಭಕ್ತರಿಗೆ ತೆರೆದುಕೊಳ್ಳಲಿವೆ. ಇನ್ನು ದೇವಸ್ಥಾನಗಳು, ಮಾಲ್, ಹೋಟೆಲ್ ಆರಂಭಿಸಲು ಜೂನ್ 8ರಿಂದ ಅನುಮತಿ ನೀಡಬಹುದೆಂದು ಕೇಂದ್ರ ಗೃಹ ಇಲಾಖೆ ಸೂಚಿಸಿದೆ,

ಶಾಲೆ ಕಾಲೇಜುಗಳು ಓಪನ್ ಇಲ್ಲ:
ಇನ್ನು ಮೊದಲನೇ ಹಂತದಲ್ಲಿ ಶಾಲಾ ಕಾಲೇಜುಗಳನ್ನು ತೆರೆಯಲು ಅನುಮತು ನೀಡಿಲ್ಲ. ಎರಡನೇ ಹಂತದಲ್ಲಿ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳೊಂದಿಗೆ ಚರ್ಚಿಸಿದ ನಂತರ ಶಾಲಾ-ಕಾಲೇಜುಗಳು, ಶಿಕ್ಷಣ ಸಂಸ್ಥೆಗಳು ಮತ್ತು ತರಬೇತಿ ಸಂಸ್ಥೆಗಳನ್ನು ಆರಂಭಿಸುವ ಬಗ್ಗೆ ನಿರ್ಧರಿಸಲಾಗುವುದು ಎಂದು ಕೇಂದ್ರ ತಿಳಿಸಿದೆ. ಆದರೆ, ಸದ್ಯಕ್ಕೆ ಯಾವುದೇ ಪ್ರಸ್ತಾಪಗಳು ಹೊರ ಬಿದ್ದಿಲ್ಲ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.