HomePage_Banner_
HomePage_Banner_
HomePage_Banner_

ಅಡುಗೆ ಅನಿಲ ಬೆಲೆ ದಿಢೀರ್ ಏರಿಕೆ; ಇಂದಿನಿಂದಲೇ ಹೊಸ ದರ ಜಾರಿ

Advt_NewsUnder_1

ಬೆಳ್ತಂಗಡಿ: ಕೊರೋನಾ ವೈರಸ್‌ನಿಂದಾಗಿ ಲಾಕ್‌ಡೌನ್ ಹಂತ ಹಂತವಾಗಿ ಹಿಂತೆಗೆದುಕೊಳ್ಳುತ್ತಿರುವ ಬೆನ್ನಲ್ಲೇ ದೇಶೀಯ ಅಡುಗೆ ಅನಿಲ ಬೆಲೆಯನ್ನು ಹೆಚ್ಚಿಸಲಾಗಿದೆ. ಹೊಸ ದರಗಳು ಜೂ.1 ರಿಂದಲೇ ಜಾರಿಗೆ ಬರಲಿವೆ.

ಸಬ್ಸಿಡಿ ರಹಿತ ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಸಿಲಿಂಡರ್‌ನ ಬೆಲೆಯನ್ನು ಇಂಡೇನ್ ಗ್ಯಾಸ್ ಸಿಲಿಂಡರ್‌ಗೆ 11.50 ರುಪಾಯಿ ಹೆಚ್ಚಿಸಲಾಗಿದೆ. ಇದು ಜೂ. 1ರಿಂದ ಜಾರಿಯಾಗಿದೆ. ಮುಂಬರುವ ವಾರಗಳಲ್ಲಿ ಹೆಚ್ಚಿನ ಸಂಖ್ಯೆಯ ವ್ಯವಹಾರಗಳು ಪುನಾರಂಭಗೊಳ್ಳುವ ನಿರೀಕ್ಷೆಯ ಬೆನ್ನಲ್ಲೇ ಈ ಹೊಸ ದರಗಳು ಜಾರಿಗೆ ಬಂದಿವೆ.

ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಗಳನ್ನು ಇಂಧನ ಚಿಲ್ಲರೆ ವ್ಯಾಪಾರಿಗಳು ಪ್ರತಿ ತಿಂಗಳ ಮೊದಲ ದಿನದಂದು ಪರಿಷ್ಕರಿಸುತ್ತಾರೆ, ಮುಖ್ಯವಾಗಿ ಎಲ್‌ಪಿಜಿಯ ಅಂತರರಾಷ್ಟ್ರೀಯ ಮಾನದಂಡ ದರ ಮತ್ತು ಯುಎಸ್ ಡಾಲರ್ ಮತ್ತು ಭಾರತೀಯ ರುಪಾಯಿ ವಿನಿಮಯ ದರವನ್ನು ಅವಲಂಬಿಸಿರುತ್ತದೆ. ಆದರೆ ಜೂನ್ ತಿಂಗಳಿನಲ್ಲಿ ಎಲ್‌ಪಿಜಿಯ ಅಂತರಾಷ್ಟ್ರೀಯ ಬೆಲೆಗಳಲ್ಲಿ ಹೆಚ್ಚಳ ಕಂಡುಬಂದಿರುವ ಪರಿಣಾಮ, ದೆಹಲಿ ಮಾರುಕಟ್ಟೆಯಲ್ಲಿ ಎಲ್‌ಪಿಜಿಯ ಪ್ರತಿ ಸಿಲಿಂಡರ್ ಬೆಲೆಯನ್ನು 11.50 ರೂ.ಗಳನ್ನು ಹೆಚ್ಚಿಸಲಾಗುವುದು ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಇನ್ನು, ಈ ಹೊಸ ದರಗಳು ಪ್ರಧಾನ್ ಮಂತ್ರಿ ಉಜ್ವಲ ಯೋಜನೆಯ (ಪಿಎಂಯುವೈ) ಫಲಾನುಭವಿಗಳ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಸರ್ಕಾರಿ ಸ್ವಾಮ್ಯದ ತೈಲ ಮತ್ತು ಅನಿಲ ಕಂಪನಿ ಹೇಳಿದೆ. ಏಕೆಂದರೆ ಅವುಗಳು ಪ್ರಧಾನ್ ಮಂತ್ರಿ ಗರಿಬ್ ಕಲ್ಯಾಣ್ ಯೋಜನೆಗೆ ಒಳಪಟ್ಟಿವೆ ಮತ್ತು ಜೂ. 30ರವರೆಗೆ ಉಚಿತ ಸಿಲಿಂಡರ್‌ಗೆ ಅರ್ಹವಾಗಿವೆ.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.