ಬೆಳ್ತಂಗಡಿ: ಎಸ್ಡಿಎಂ ಆಂಗ್ಲ ಮಾಧ್ಯಮ ಶಾಲೆಯ 8ನೇ ತರಗತಿಯ ಗೈಡ್ಸ್ ವಿದ್ಯಾರ್ಥಿನಿ ಆಕಾಂಕ್ಷಾ ಶೆಟ್ಟಿ ಅವರು ಮುಂಡೂರು ಹಾಲು ಉತ್ಪಾದಕರ ಸಂಘದ ಸದಸ್ಯರಿಗೆ ಸ್ವತಃ ತಾನು ಹೊಲಿದ ಮಾಸ್ಕ್ ವಿತರಿಸಿದರು.
ಕೊರೊನಾ ವೈರಸ್ ಬಗ್ಗೆ ಮತ್ತು ಸ್ಯಾನಿಟೈಸರ್ ಬಳಕೆಯ ಜಾಗೃತಿ ಮೂಡಿಸಿ ಸಂಘದ ಎಲ್ಲಾ ಸದಸ್ಯರಿಗೆ ಹಾಗೂ ಬಡ ಕುಟುಂಬಗಳ ಮನೆಗಳಿಗೆ ತೆರಳಿ ಸ್ಯಾನಿಟೈಸರ್ ಬಳಕೆಯ ವಿಧಾನದ ಬಗ್ಗೆ ಮಾಹಿತಿ ನೀಡಿ ಮಾಸ್ಕ್ ನೀಡಿದರು.