ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾಗೆ 8ನೇ ಬಲಿ, ಮಹಾರಾಷ್ಟ್ರದಿಂದ ಬಂದಿದ್ದ ಯುವಕ ಸಾವು

ಮಂಗಳೂರು: ಕರಾವಳಿಯಲ್ಲಿ ಕೊರೋನಾ ಅಟ್ಟಹಾಸ ಮುಂದುವರೆಯುತ್ತಿದ್ದು, ಸೋಂಕಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಂಟನೇ ಬಲಿಯಾಗಿದೆ. ಮಹಾರಾಷ್ಟ್ರದಿಂದ ಬಂದಿದ್ದ 26 ವರ್ಷದ ಯುವಕ ಕೊರೋನಾಗೆ ಬಲಿಯಾಗಿದ್ದಾನೆ.

ಮಹಾರಾಷ್ಟ್ರದಿಂದ ಬಂದು ಕ್ವಾರೆಂಟೈನ್ ‌ಮುಗಿಸಿ ಮನೆಗೆ ಹೋಗಿದ್ದ 26ರ ಯುವಕ ಕಿಡ್ನಿ ಸಮಸ್ಯೆ ಹಿನ್ನೆಲೆ ಮತ್ತೆ ‌ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಯುವಕ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ಯುವಕ ಕೋವಿಡ್-19 ಪರೀಕ್ಷೆ ಮಾಡಲಾಗಿದ್ದು, ಆ ವೇಳೆ ಆತನಿಗೆ ಕೋವಿಡ್-19 ಸೋಂಕು ಇರುವುದು ದೃಢವಾಗಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.