ಸುಬ್ರಹ್ಮಣ್ಯ ದೇವಸ್ಥಾನದಿಂದ ತಾಲೂಕಿನ 60 ಸಿ ದರ್ಜೆ ದೇವಸ್ಥಾನಗಳಿಗೆ ಕಿಟ್ ವಿತರಣೆ

ಬೆಳ್ತಂಗಡಿ ತಾಲೂಕಿನ 60ಸಿ ದರ್ಜೆ ದೇವಸ್ಥಾನದ ಅರ್ಚಕರು ಮ್ತು ಸಿಬ್ಬಂದಿಗಳಿಗೆ ಶ್ರೀ ಕ್ಷೇತ್ರ ಸುಬ್ರಹ್ಮಣ್ಯದಿಂದ ರೂ. 1 ಸಾವಿರ ಮೌಲ್ಯದ ಆಹಾರ ಕಿಟ್‌ಗಳನ್ನು ಜೂ.19 ರಂದು ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ವಠಾರದಲ್ಲಿ ವಿತರಿಸಲಾಯಿತು.

ಶ್ರೀ ಕ್ಷೇತ್ರ ಸುಬ್ರಹ್ಮಣ್ಯ ದೇವಸ್ಥಾನದ ಪಿ.ಆರ್.ಬಿ ಗೋಪಿನಾಥ್ ಆಹಾರ ಕಿಟ್‌ಗಳನ್ನು ವಿತರಿಸಿ ಮಾತನಾಡಿ ಸುಳ್ಯ, ಪುತ್ತೂರು ತಾಲೂಕಿನಲ್ಲಿ ಈಗಾಗಲೇ ಆಹಾರ ಕಿಟ್‌ಗಳನ್ನು ವಿತರಿಸಲಾಗಿದೆ. ಬೆಳ್ತಂಗಡಿ ತಾಲೂಕಿನ 60 ದೇವಸ್ಥಾನಗಳಿಗೆ ಇಂದು ಆಹಾರ ಕಿಟ್ ವಿತರಿಸಲಾಗುತ್ತಿದೆ ಎಂದರು.

ಈ ಸಂದರ್ಭದಲ್ಲಿ ಉಜಿರೆ ದೇವಸ್ಥಾನದ ಶರತ್‌ಕೃಷ್ಣ ಪಡ್ವೆಟ್ನಾಯ, ಸಾಮಾಜಿಕ ಕಾರ್ಯಕರ್ತ ಕೇಶವ ವಿ ಫಡಕೆ, ಆಳಿತಾಧಿಕಾರಿ ಜಯಕೀರ್ತಿ, ಗ್ರಾ.ಪಂ ಸದಸ್ಯ ಶ್ರೀನಿವಾಸ್ ರಾವ್, ಜಯರಾಮ ಗೌಡ ಮೊದಲಾದವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.