ಮಡಂತ್ಯಾರು : ಸುಜ್ಞಾನನಿಧಿ ಶಿಷ್ಯ ವೇತನ ವಿತರಣಾ ಕಾರ್ಯಕ್ರಮ

Advt_NewsUnder_1
Advt_NewsUnder_1
Advt_NewsUnder_1

ಮಡಂತ್ಯಾರು:ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಡಂತ್ಯಾರು ವಲಯದ ವತಿಯಿಂದ ಜೂ.8 ರಂದು ಸುಜ್ಞಾನ ನಿಧಿ ವಿತರಣಾ ಕಾರ್ಯಕ್ರಮವನ್ನು ಪಾರೆಂಕಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ವಠಾರದಲ್ಲಿ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಪ್ರಸ್ತುತ ವರ್ಷ 19 ಮಂದಿ ವಿದ್ಯಾರ್ಥಿಗಳಿಗೆ ಸುಜ್ಞಾನ ನಿಧಿ ಶಿಷ್ಯವೇತನ ಮಂಜೂರಾತಿ ಪತ್ರವನ್ನು ವಿತರಿಸಲಾಯಿತು ಮಡಂತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷ ಗೋಪಾಲಕೃಷ್ಣ ಕೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ತಾಲೂಕು ಯೋಜನಾಧಿಕಾರಿಗಳಾದ ಯಶವಂತ್ ಎಸ್, ಶಿಕ್ಷಕ ಧರಣೇಂದ್ರ ಕುಮಾರ್ ಜೈನ್, ಮಡಂತ್ಯಾರು ರೋಟರಿ ಕ್ಲಬ್ ಅಧ್ಯಕ್ಷರಾದ ಬಿ ಜಯಂತ್ ಶೆಟ್ಟಿ, ಜನಜಾಗೃತಿ ವೇದಿಕೆ ಸದಸ್ಯರಾದ ಪದ್ಮನಾಭ ಸಾಲ್ಯಾನ್, ಪಾರೆಂಕಿ ಮಹಿಷಮರ್ಧಿನಿ ದೇವಸ್ಥಾನದ ಪ್ರದಾನ ಅರ್ಚಕರಾದ ಶ್ರೀಧರ್ ಭಟ್, ಒಕ್ಕೂಟ ಅಧ್ಯಕ್ಷರುಗಳಾದ ಬಾಲಚಂದ್ರ ಹೆಗ್ಡೆ, ಹರೀಶ್ ಶೆಟ್ಟಿ ಪದೆಂಜಿಲ, ಹಾಗೂ ವಲಯದ ಎಲ್ಲಾ ಒಕ್ಕೂಟದ ಅಧ್ಯಕ್ಷರುಗಳು ಹಾಗೂ ಸುಜ್ಞಾನ ನಿಧಿ ಫಲಾನುಭವಿ ಕುಟುಂಬದ ಸದಸ್ಯರುಗಳು ಹಾಗೂ ವಲಯದ ಸೇವಾಪ್ರತಿನಿಧಿಗಳು ಹಾಗೂ ಮಡಂತ್ಯಾರು ವಲಯದ ನೂತನ ಮೇಲ್ವಿಚಾರಕ ಆದಿತ್ಯ ಉಪಸ್ಥಿತರಿದ್ದರು. ಬಸವನಗುಡಿ ಒಕ್ಕೂಟ ಕಾರ್ಯದರ್ಶಿ ವೆಂಕಟೇಶ್ ಅತ್ತಾಜೆ ಕಾರ್ಯಕ್ರಮ ನಿರೂಪಿಸಿ, ವಲಯ ಮೇಲ್ವಿಚಾರಕರಾದ ಸಚಿನ್ ಸ್ವಾಗತಿಸಿದರು . ಹಾಗೂ ಸೇವಾ ಪ್ರತಿನಿಧಿ ಹರಿಣಾಕ್ಷಿ ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.