ಬೆಳ್ತಂಗಡಿ: ಬೆಳ್ತಂಗಡಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಇಂದಬೆಟ್ಟು ಕ್ಷೇತ್ರದ ಬಿಜೆಪಿ ಬೆಂಬಲಿತ ಸದಸ್ಯ ಆನಂದ ನಾಯ್ಕ ಜೂ.27ರಂದು ಕಾಂಗ್ರೇಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ಬೆಳ್ತಂಗಡಿ ಪತ್ರಿಕಾ ಭವನದಲ್ಲಿ ಕಾಂಗ್ರೇಸ್ ಜಿಲ್ಲಾ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಕೆ. ಹರೀಶ್ ಕುಮಾರ್ ಪಕ್ಷದ ಧ್ವಜ ನೀಡುವ ಮೂಲಕ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಕೆ. ವಸಂತ ಬಂಗೇರ, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರುಗಳಾದ ಕೆ. ಶೈಲೇಶ್ ಕುಮಾರ್, ರಂಜನ್ ಜಿ.ಗೌಡ, ಎಪಿಎಂಸಿ ಮಾಲೆ ಅಧ್ಯಕ್ಷ ಭರತ್ ಕುಮಾರ್, ಕಾಂಗ್ರೇಸ್ ಪಕ್ಷದ ಪದಾಧಿಕಾರಿಗಳಾದ ಬಿ.ಕೆ ವಸಂತ್, ಮೆಹಬೂಬ್ ಉಪಸ್ಥಿತರಿದ್ದರು.