ಬೆಳ್ತಂಗಡಿ: ಕರ್ನಾಟಕ ಪ್ರದೇಶ ಕಾಂಗ್ರೇಸ್ ಪಕ್ಷದ ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡಿರುವ ಡಿ.ಕೆ ಶಿವಕುಮಾರ್ ಮತ್ತು ಇತರ ಕಾರ್ಯಕರ್ತರ ಪದಗ್ರಹಣ ಸಮಾರಂಭ ರಾಜ್ಯದಾಂತ್ಯಂತ ಏಕಕಾಲದಲ್ಲಿ 7831 ಕಡೆ ವಿಶಿಷ್ಟ ರೀತಿಯಲ್ಲಿ ನಡೆಯಲಿದೆ ಎಂದು ಕಾಂಗ್ರೇಸ್ ಜಿಲ್ಲಾ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಶಾಸಕ ಕೆ. ಹರೀಶ್ ಕುಮಾರ್ ಹೇಳಿದರು. ಅವರು ಜೂ.27 ರಂದು ಬೆಳ್ತಂಗಡಿ ಪತ್ರಿಕಾ ಭವನದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಪತ್ರಿಕಾ ಗೋಷ್ಠಿಯಲ್ಲಿ ಮಾಜಿ ಶಾಸಕ ವಸಂತ ಬಂಗೇರ, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಕೆ. ಶೈಲೇಶ್ ಕುಮಾರ್, ರಂಜನ್ ಜಿ.ಗೌಡ, ಪಕ್ಷಕ್ಕೆ ಸೇರ್ಪಡೆಗೊಂಡ ಎ.ಪಿ.ಎಂ.ಸಿ ಸದಸ್ಯ ಆನಂದ ನಾಯ್ಕ ಮಾಜಿ ಅಧ್ಯಕ್ಷ ಭರತ್ ಕುಮಾರ್, ಪಕ್ಷದ ಪದಾಧಿಕಾರಿಗಳಾದ ಬಿ.ಕೆ ವಸಂತ್, ಮೆಹಬೂಬ್ ಉಪಸ್ಥಿತರಿದ್ದರು