ಆರಂಬೋಡಿ: ಆರಂಬೋಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಉದ್ಘಾಟನಾ ಕಾರ್ಯಕ್ರಮ ಹೊಕ್ಕಾಡಿಗೋಳಿ ಕೂಡುರಸ್ತೆಯಲ್ಲಿ ಜು.8ರಂದು ನಡೆಯಿತು. ದ.ಕ ಹಾಲು ಒಕ್ಕೂಟದ ಅಧ್ಯಕ್ಷರಾದ ಕೆ. ರವಿರಾಜ್ ಹೆಗ್ಡೆ ಉದ್ಘಾಟಿಸಿದರು.
ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಅಧ್ಯಕ್ಷತೆಯನ್ನು ವಹಿಸಿದರು. ಶ್ರೀ ಕ್ಷೇತ್ರ ಪೂಂಜ ದೇವಸ್ಥಾನದ ಶ್ರೀ ಕೃಷ್ಣಪ್ರಸಾದ್ ಅಸ್ರಣ್ಣರು ಶುಭ ಹಾರೈಸಿದರು. ವೇದಿಕೆಯಲ್ಲಿ ಆರಂಬೋಡಿ ಗ್ರಾ.ಪಂ ಅಧ್ಯಕ್ಷರಾದ ಪ್ರಭಾಕರ್ ಹೆಚ್, ದ.ಕ ಹಾಲು ಒಕ್ಕೂಟದ ಉಪಾಧ್ಯಕ್ಷ ಪ್ರಕಾಶ್ ಚಂದ್ರ ಶೆಟ್ಟಿ, ನಿರ್ದೇಶಕರುಗಳಾದ ಪದ್ಮನಾಭ ಶೆಟ್ಟಿ ಅರ್ಕಜೆ, ಸವಿತಾ ಶೆಟ್ಟಿ, ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ಹೊಸಂಗಡಿ ತಾ.ಪಂ ಸದಸ್ಯ ಓಬಯ್ಯ, ಆರಂಬೋಡಿ ಗ್ರಾ.ಪಂನ ಅಭಿವೃದ್ಧಿ ಅಧಿಕಾರಿ ಗಣೇಶ್ ಶೆಟ್ಟಿ, ಬೆಳ್ತಂಗಡಿ ಎಲ್.ಡಿ ಬ್ಯಾಂಕ್ ನಿರ್ದೇಶಕಿ ವಿಜಯ ರಮೇಶ್, ವಿಸ್ತರಣಾಧಿಕಾರಿ ಸುಚಿತ್ರ, ಪಂಚಾಯತ್ ಸದಸ್ಯರು, ಆರಂಬೋಡಿ ಹಾಲು ಉತ್ಪಾದಕರ ನಿರ್ದೇಶಕರು, ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಣೇಶ್ ಶೆಟ್ಟಿ ಸ್ವಾಗತಿಸಿದರು. ಉಮೇಶ್ ಶೆಟ್ಟಿ ಪಾಳ್ಯ ಕಾರ್ಯಕ್ರಮ ನಿರೂಪಿಸಿ, ಸಂಘದ ಕಾರ್ಯದರ್ಶಿ ಪ್ರದೀಪ್ ವಂದಿಸಿದರು.