ಬೆಳ್ತಂಗಡಿ: ತಾಲ್ಲೂಕಿನ ಮರೋಡಿ ಗ್ರಾಮದ ನೆಲ್ಲಿಗುಡ್ಡೆಯ ಬಳಿ ವ್ಯಕ್ತಿಯೊಬ್ಬರಿಗೆ ಕೋವಿಡ್ ದೃಢಪಟ್ಟಿದೆ.
ಮೇಸ್ತ್ರಿ ಕೆಲಸ ಮಾಡುತ್ತಿದ್ದ 50 ವರ್ಷ ವ್ಯಕ್ತಿಗೆ ಸೋಂಕು ದೃಢಪಟ್ಟಿದ್ದು, ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಹಲವು ಸಮಯಗಳಿಂದ ಕಾಯಿಲೆಯಿಂದ ಬಳಲುತ್ತಿದ್ದ ಅವರು ಐದು ದಿನಗಳ ಹಿಂದೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಶಸ್ತ್ರಚಿಕಿತ್ಸೆಗಾಗಿ ತೆರಳಿದ್ದರು. ಫಿಟ್ನೆಟ್ಗಾಗಿ ಪರೀಕ್ಷೆ ನಡೆಸುವ ಸಂದರ್ಭದಲ್ಲಿ ಅವರಿಗೆ ಕೋವಿಡ್ ದೃಢಪಟ್ಟಿದೆ.
ಸೋಂಕಿತರ ಮನೆಯಲ್ಲಿ ಸೀಲ್ಡೌನ್ ಮಾಡಲಾಗಿದೆ. ಅವರ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕದಲ್ಲಿದ್ದ 17ಕ್ಕೂ ಅಧಿಕ ಮಂದಿಗೆ ಕ್ವಾರಂಟೈನ್ ಮಾಡಲಾಗಿದೆ.