ಬೆಳ್ತಂಗಡಿ: ಕೊರೊನಾ ಮಹಾಮಾರಿ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತೆ ಕ್ರಮಗಳ ಬಗ್ಗೆ ಹಾಗೂ ಲಾಕ್ ಡೌನ್ ಜಾರಿ ಮಾಡುವ ಕುರಿತು 48 ಗ್ರಾ.ಪಂ ವ್ಯಾಪ್ತಿ ಪ್ರತಿನಿಧಿಗಳ ಜೊತೆ ಸಮಾಲೋಚನಾ ಸಭೆ ಜು.11 ರಂದು ಎಸ್.ಡಿ.ಎಮ್ ಸಭಾಂಗಣದಲ್ಲಿ ಜರುಗಿತು.
ಅಧ್ಯಕ್ಷತೆಯನ್ನು ಶಾಸಕ ಹರೀಶ್ ಪೂಂಜ ವಹಿಸಿದ್ದರು. ತಾಲೂಕನ್ನು ಕೊರೊನಾ ಮುಕ್ತ ತಾಲೂಕು ಆಗಿ ಪರಿವರ್ತಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರ ಪ್ರಯತ್ನ ಅಗತ್ಯ. ಕೊರೊನಾ ಹೆಚ್ಚಾಗದಂತೆ ಪ್ರತಿಯೊಬ್ಬರಲ್ಲಿ ಜಾಗೃತಿ ಮೂಡಿಸಬೇಕು. ಪ್ರತಿ ಬೂತ್ ನಲ್ಲಿ ಕೊರೊನಾ ಸೈನಿಕರ ತಂಡವನ್ನು ರಚಿಸಬೇಕು, ತಾಲೂಕಿನಲ್ಲಿ ಲಾಕ್ ಡೌನ್ ಜಾರಿ ಮಾಡುವ ಬಗ್ಗೆ ಅಭಿಪ್ರಾಯ ತಿಳಿಸಬೇಕು ಎಂದು ತಿಳಿಸಿದರು.
ವೇದಿಕೆಯಲ್ಲಿ ತಹಶೀಲ್ದಾರ್ ಮಹೇಶ್ ಜೆ, ಕಾರ್ಯನಿರ್ವಾಹಣಾಧಿಕಾರಿ ಜಯರಾಮ್, ನ.ಪಂ ಮುಖ್ಯಾಧಿಕಾರಿ ಸುಧಾಕರ್, ಜಿ.ಪಂ ಸದಸ್ಯ ಕೊರಗಪ್ಪ, ಆರೋಗ್ಯಾಧಿಕಾರಿ ಡಾ.ಕಲಾಮಧು ಉಪಸ್ಥಿತರಿದ್ದರು.
ತಾಲೂಕಿನ ಪ್ರತಿ ಗ್ರಾಮ ಪಂಚಾಯತ್ ನಿಂದ ತಲಾ ಇಬ್ಬರು ಪ್ರತಿನಿಧಿಗಳು, ನ.ಪಂ, ತಾ.ಪಂ, ಜಿ.ಪಂ ಸದಸ್ಯರು ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು