ಅಂಬೇಡ್ಕರ್ ಭವನಕ್ಕೆ ಮೀಸಲಾದ ಜಾಗದಲ್ಲಿ ಗೂಡಂಗಡಿ: ಡಿ.ಎಸ್.ಎಸ್ ಆಕ್ಷೇಪ

Advt_NewsUnder_1
Advt_NewsUnder_1
Advt_NewsUnder_1

 

ಬೆಳ್ತಂಗಡಿ: ನಗರ ಪಂಚಾಯತ್ ವ್ಯಾಪ್ತಿಯಲ್ಲಿ ರೂ.1.5 0 ಕೋಟಿ ರೂಪಾಯಿ ಮೊತ್ತದಲ್ಲಿ ನಡೆಯಬೇಕಾಗಿದ್ದ ಅಂಬೇಡ್ಕರ್ ಭವನಕ್ಕೆ ಮೀಸಲಿರಿಸಿದ ಜಮೀನಿನಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ಗೂಡಂಗಡಿ ನಿಮಿ೯ಸುತ್ತಿರುವುದಕ್ಕೆ ತಾಲೂಕು ಡಿಎಸ್ ಎಸ್ ಪ್ರತಿನಿಧಿಗಳು ಆಕ್ಷೇಪ ವ್ಯಕ್ತಪಡಿಸಿದರು.

ದ.ಸಂ.ಸ ರಾಜ್ಯ ಸಂಘಟನಾ ಸಂಚಾಲಕ ಚಂದು ಎಲ್, ಮೈಸೂರು ವಿಭಾಗೀಯ ಸಂಘಟನಾ ಸಂಚಾಲಕ ಬಿ.ಕೆ ವಸಂತ್ ತಾಲೂಕು ಸಂಘಟನಾ ಸಂಚಾಲಕರುಗಳಾದ ನಾಗರಾಜ್ ಎಸ್ ಲಾಯಿಲ, ಸತೀಶ್ ಅಳದಂಗಡಿ ಅಂಬೇಡ್ಕರ್ ಸಂಘಟನೆಯ ಮುಖಂಡರು ಹಾಜರಿದ್ದರು. ನಗರ ಪಂಚಾಯತ್ ಮುಖ್ಯಾಧಿಕಾರಿ ಸುಧಾಕರ್, ಇಂಜಿನಿಯರ್ ಮಹಾವೀರ ಆರಿಗ, ಸಿಬ್ಬಂದಿ ಮೆಟಿಲ್ಡಾ ಮುಂತಾದವರು ಆಗಮಿಸಿ ಪರಿಶೀಲನೆ ನಡೆಸಿ, ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.