ನಾಳೆ ಸಂಡೇ ಲಾಕ್ ಡೌನ್ ಬೆಳಿಗ್ಗೆಯ ವಿನಾಯಿತಿ ಇಲ್ಲ

ಬೆಳ್ತಂಗಡಿ: ಜುಲೈ 19ರ ಆದಿತ್ಯವಾರದಂದು ಪೂರ್ಣ ಲಾಕ್ ಡೌನ್ ಜಾರಿಯಲ್ಲಿರಲಿದೆ. ಮಹಾಮಾರಿ ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಈಗಾಗಲೇ ದ.ಕ. ಜಿಲ್ಲೆಯಲ್ಲಿ ಜುಲೈ 16ರಿಂದ 23ರವರೆಗೆ ಲಾಕ್ ಡೌನ್ ಜಾರಿಗೊಳಿಸಲಾಗಿದೆ.

ಈ ಲಾಕ್ ಡೌನ್ ಅವಧಿಯಲ್ಲಿ ಬೆಳಿಗ್ಗೆ 8 ಗಂಟೆಯಿಂದ 11ರವರೆಗೆ ರಿಯಾಯಿತಿ ನೀಡಲಾಗಿದೆ. ಆದರೆ ಅದಕ್ಕೆ ಮುಂಚಿತವಾಗಿಯೇ ಘೋಷಣೆ ಮಾಡಲಾಗಿರುವ ಸಂಡೇ ಲಾಕ್ಡೌನ್ ಆದೇಶದಲ್ಲಿ ಆದಿತ್ಯವಾರದಂದು ಪೂರ್ಣ ಲಾಕ್ಡೌನ್ ಜಾರಿಯಲ್ಲಿದೆ. ಈ ನಿಟ್ಟಿನಲ್ಲಿ ಜುಲೈ 19ರ ಭಾನುವಾರ ಪೂರ್ತಿ ಲಾಕ್ ಡೌನ್ ಇರಲಿದೆ. ಪ್ರತಿ ದಿನ ಬೆಳಿಗ್ಗೆ 8 ರಿಂದ 11 ಗಂಟೆಯ ಲಾಕ್ ಡೌನ್ ರಿಯಾಯಿತಿ ಇರುವುದಿಲ್ಲ ಎಂದು ಜಿಲ್ಲಾಡಳಿತದ ಮಾಹಿತಿ ತಿಳಿಸಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.