ಬೆಳ್ತಂಗಡಿ ಮಿನಿ ವಿಧಾನ ಸೌಧಕ್ಕೆ ಸ್ಯಾನಿಟೈಸಿಂಗ್

ಬೆಳ್ತಂಗಡಿ: ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ತಾಲೂಕಿನಲ್ಲಿ ಅತ್ಯಧಿಕ ಸಂಖ್ಯೆಯಲ್ಲಿ ವಿವಿಧ ಕೆಲಸಗಳಿಗಾಗಿ ಜನರು ಬರುವ ಬೆಳ್ತಂಗಡಿ ಮಿನಿ ವಿಧಾನ ಸೌಧಕ್ಕೆ ಜು.18ರಂದು ಬೆಳಗ್ಗಿನ ಜಾವ ಸ್ಯಾನಿಟೈಸಿಂಗ್ ಮಾಲಾಯಿತು.

ಬೆಳ್ತಂಗಡಿ ತಹಶೀಲ್ದಾರ್ ಅವರ ಕೋರಿಕೆ ಮೇರಿಗೆ ಬೆಳ್ತಂಗಡಿ ಪಟ್ಟಣ ಪಂಚಾಯತು ವತಿಯಿಂದ ಈ ವ್ಯವಸ್ಥೆಯನ್ನು ಮಾಡಲಾಯಿತು. ಮಿನಿ ವಿಧಾನ ಸೌಧದ ಎಲ್ಲಾ ಕೊಠಡಿಗಳಿಗೆ ಮೂರು ಹೋಬಳಿಗಳ ಕಂದಾಯ ನಿರೀಕ್ಷಕರ ಕಚೇರಿಗಳಿಗೆ ಸ್ಯಾನಿಟೈಸಿಂಗ್ ಮಾಡಲಾಯಿತು. ಕಂದಾಯ ಕೆಲಸಗಳಿಗೆ ತಾಲೂಕಿನಿಂದ ಅತೀ ಹೆಚ್ಚು ಸಂಖ್ಯೆಯಲ್ಲಿ ಜನರು ಬರುತ್ತಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಇದನ್ನು ಮಾಡಿಸಲಾಯಿತು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.