ನಾವರ: ವನಮಹೋತ್ಸವ ಕಾರ್ಯಕ್ರಮ

ನಾವರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಗುರುವಾಯನಕೆರೆ, ಲಯನ್ಸ್ ಕ್ಲಬ್ ಬೆಳ್ತಂಗಡಿ, ಪ್ರಗತಿ ಬಂಧು ಒಕ್ಕೂಟ ನಾವರ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಆಡಳಿತ ಸಮಿತಿ ನಾವರ,ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿ ನಾವರ ಇದರ ಸಂಯುಕ್ತ ಆಶ್ರಯದಲ್ಲಿ ನಾವರ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ವನಮಹೋತ್ಸವ ಕಾರ್ಯಕ್ರಮವನ್ನು ನಡೆಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಾಲಿಂಗೇಶ್ವರ ದೇವಸ್ಥಾನ ನಾವರ ಇದರ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಲ। ಪ್ರಕಾಶ್ ಶೆಟ್ಟಿ ನೊಚ್ಚ ವಹಿಸಿದ್ದರು.

ಕಾರ್ಯಕ್ರಮದ ಬಗ್ಗೆ ಜನಜಾಗೃತಿ ವೇದಿಕೆ ವಲಯಾಧ್ಯಕ್ಷ ನಿತ್ಯಾನಂದ ನಾವರ ಪ್ರಾಸ್ತಾವಿಕ ಮಾತನಾಡಿದರು.ನಾವರ ಕ್ಷೇತ್ರದಲ್ಲಿ ವನಮಹೋತ್ಸವವನ್ನು ಆಯೋಜಿಸಿದ ಬಗ್ಗೆ ಲಯನ್ಸ್ ಕ್ಲಬ್ ಬೆಳ್ತಂಗಡಿ ಅಧ್ಯಕ್ಷ ಲ। ರವೀಂದ್ರ ಶೆಟ್ಟಿ ಬಳಂಜ ಮೆಚ್ಚುಗೆಯ ಮಾತುಗಳನ್ನಾಡಿದರು.ವೇದಿಕೆಯಲ್ಲಿ ಲಯನ್ಸ್ ಕ್ಲಬ್ ಬೆಳ್ತಂಗಡಿಯ ಕಾರ್ಯದರ್ಶಿ ಲ। ದತ್ತಾತ್ರೇಯ ಜಿ.ಗೊಲ್ಲ, ಕೋಶಾಧಿಕಾರಿ ಲ। ಅನಂತಕೃಷ್ಣ, ನಾವರ ಪ್ರಗತಿ ಬಂಧು ಒಕ್ಕೂಟ ಅಧ್ಯಕ್ಷ ವೀರೇಂದ್ರ ಕುಮಾರ್ ಜೈನ್, ಮಹಾಲಿಂಗೇಶ್ವರ ದೇವಸ್ಥಾನ ನಾವರ ಆಡಳಿತ ಸಮಿತಿ ಅಧ್ಯಕ್ಷ ಜಯ ಪೂಜಾರಿ ಕೋರಲ್ಲ ಉಪಸ್ಥಿತರಿದ್ದರು. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವ್ರಧ್ಧಿ ಯೋಜನೆ ಅಳದಂಗಡಿ ವಲಯದ ಮೇಲ್ವಿಚಾರಕಿ ಮಲ್ಲಿಕಾ ನಿರೂಪಿಸಿದರು. ಸೇವಾ ಪ್ರತಿನಿಧಿ ಲ। ಪುಷ್ಪಾವತಿ ಕಾರ್ಯಕ್ರಮ ಸಂಘಟಿಸಿದ್ದರು. ವಿಜಯ ಕುಮಾರ್ ಜೈನ್ ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.