ತಾಲೂಕಿನಲ್ಲಿ ಹೆಚ್ಚುತ್ತಿರುವ ಗೋ ಅಕ್ರಮ ಸಾಗಾಟ; ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಸಭೆ

ಬೆಳ್ತಂಗಡಿ ತಾಲೂಕಿನಾದ್ಯಂತ ವ್ಯಾಪಕವಾಗಿ ನಡೆಯುತ್ತಿರುವ ಗೋ ಕಳ್ಳತನ, ಅಕ್ರಮ ಗೋಸಾಗಾಟಕ್ಕೆ ಕಡಿವಾಣ ಹಾಕಲು ಮತ್ತು ಅದರ ವಿರುದ್ಧ ಕ್ರಮ ಕೈಗೊಳ್ಳಲು ತಾಲೂಕಿನ ಪೊಲೀಸ್ ಠಾಣಾ ವೃತ್ತ ನಿರೀಕ್ಷಕರು ಮತ್ತು ಸಬ್ ಇನ್ಸ್‌ಪೆಕ್ಟರ್ ಗಳ ಜೊತೆ ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳ ಮುಖಂಡರ ಉಪಸ್ಥಿತಿಯಲ್ಲಿ ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ಜು.28 ರಂದು ಬೆಳ್ತಂಗಡಿ ಪ್ರವಾಸಿ ಮಂದಿರದಲ್ಲಿ ಸಭೆ ನಡೆಯಿತು.

ಈ ಸಂದರ್ಭದಲ್ಲಿ ವಿಶ್ವಹಿಂದೂ ಪರಿಷತ್ತು ತಾಲೂಕು ಅಧ್ಯಕ್ಷ ಸುಬ್ರಹ್ಮಣ್ಯ ಅಗರ್ತ, ಕಾರ್ಯದರ್ಶಿ ಮೋಹನ, ನವೀನ್ ನೆರಿಯ, ಜಿಲ್ಲಾ ಕಾರ್ಯಾದ್ಯಕ್ಷ ಭಾಸ್ಕರ ಧರ್ಮಸ್ಥಳ, ಸಂಚಾಲಕ ಸಂತೋಷ್ ಅತ್ತಾಜೆ, ವೇಣೂರು ಪ್ರಖಂಡ ಶಶಾಂಕ್ ಭಟ್ ಉಪಸ್ಥಿತರಿದ್ದರು.

ಬೆಳ್ತಂಗಡಿ, ಧರ್ಮಸ್ಥಳ, ಪುಂಜಾಲಕಟ್ಟೆ, ವೇಣೂರು, ಸಬ್ ಇನ್ಸ್ ಸ್ಪೆಕ್ಟರ್ ಹಾಗೂ ಸಂಚಾರ ಠಾಣೆಯ ಸಬ್ ಇನ್ಸ್ ಸ್ಪೆಕ್ಟರ್ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.