ಜು.31 ರಂದು ಡಿ.ಕೆ.ಶಿ. ಧರ್ಮಸ್ಥಳಕ್ಕೆ

ಬೆಳ್ತಂಗಡಿ: ಕೆ.ಪಿ.ಸಿ.ಸಿ. ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ಅಧಿಕಾರ ವಹಿಸಿಕೊಂಡ ಬಳಿಕ ಜು.31ರಂದು ಪ್ರಥಮ ಬಾರಿಗೆ ಮಂಗಳೂರಿಗೆ ಆಗಮಿಸಲಿದ್ದಾರೆ.
ಬೆಳಗ್ಗೆ 10ಕ್ಕೆ ಮಂಗಳೂರಿಗೆ ಆಗಮಿಸುವ ಡಿ.ಕೆ.ಶಿವಕುಮಾರ್‌ರವರು ಸಂಜೆ 5 ಗಂಟೆಯವರೆಗೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿ, ಸಂಜೆ 6 ಗಂಟೆಗೆ ಧರ್ಮಸ್ಥಳಕ್ಕೆ ಬಂದು ಮಂಜುನಾಥ ಸ್ವಾಮಿಯ ದರ್ಶನ ಪಡೆಯಲಿದ್ದಾರೆ. ಅಲ್ಲದೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರನ್ನೂ ಭೇಟಿಯಾಗಿ ಸಮಾಲೋಚನೆ ನಡೆಸಲಿದ್ದಾರೆಂದು ತಿಳಿದು ಬಂದಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.