ಉಜಿರೆ ವರ್ತಕರ ಸಭೆ; ನೂತನ ಪದಾಧಿಕಾರಿಗಳ ಆಯ್ಕೆ

ಉಜಿರೆ: ವರ್ತಕರ ಸಂಘದ ಸಭೆ ಜು.30 ರಂದು ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ರಾಮಕೃಷ್ಣ ಸಭಾಭವನದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ವರ್ತಕರ ಸಂಘದ ಅಧ್ಯಕ್ಷ ಬಿ.ಪಾಡುರಂಗ ಬಾಳಿಗ ವಹಿಸಿದ್ದರು. ಕಾರ್ಯಕ್ರಮವನ್ನು ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಶರತ್ ಕೃಷ್ಣ ಪಡ್ವೆಟ್ನಾಯ ಉದ್ಘಾಟಿಸಿ ಶುಭ ಹಾರೈಸಿದರು.

ಕಾನೂನು ಸಲಹೆಗಾರರಾದ ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಬಿ.ಕೆ ಧನಂಜಯ ರಾವ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ರಾಜೇಶ್ ಪೈ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಸಮಿತಿ ಪದಾಧಿಕಾರಿಗಳಾದ ಭರತ್ ಕುಮಾರ್ ಎಮ್. ಎಸ್, ಪುತ್ತುಮೋನು ಹಾಜಿ, ದಿನೇಶ್ ಕುಮಾರ್ ಎಮ್.ಎಸ್, ಶ್ರೀಧರ ಕೆ.ವಿ, ಗಣೇಶ್ ನಾಯರ್, ವೇದಿಕೆಯಲ್ಲಿ ಉಪಸ್ಥಿತರಿದ್ದರು.

ನೂತನ ಅಧ್ಯಕ್ಷರಾಗಿ ಕಾರಂತ್ ಹೊಟೇಲ್ ಮಾಲಕ ಅರವಿಂದ ಕಾರಂತ್, ಕಾರ್ಯದರ್ಶಿಯಾಗಿ ಲಕ್ಷ್ಮಣ ಗೌಡ ಇಂಡಿಯನ್ ಡ್ರೆಸಸ್ಸ್ ಕೋಶಾಧಿಕಾರಿಯಾಗಿ ಅಬೂಬಕ್ಕರ್ ಸುಪ್ರೀಂ ಲಾಡ್ಜ್, ಒಳಗೊಂಡದಂತೆ ಸಮಿತಿ ರಚಿಸಲಾಯಿತು. ಉಜಿರೆ ಗ್ರಾಮದ ವರ್ತಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ರಮ್ಯಾ ಪ್ಯಾನ್ಸಿಯ ಪ್ರಸಾದ್ ಕಾರ್ಯಕ್ರಮ ನಿರೂಪಿಸಿ, ನೂತನ ಕಾರ್ಯದರ್ಶಿ ಲಕ್ಷ್ಮಣ ಇಂಡಿಯನ್ ಡ್ರೆಸ್ಸಸ್ ವಂದಿಸಿದರು

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.