ರಬ್ಬರ್ ಬೆಳೆಗಾರರ ಸಮಸ್ಯೆಗೆ ಸ್ಪಂದಿಸಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ರವರಿಗೆ ಕಿಸಾನ್ ಕಾಂಗ್ರೆಸ್ ಸಮಿತಿಯಿಂದ ಮನವಿ

ಬೆಳ್ತಂಗಡಿ:ರಬ್ಬರ್ ಕೃಷಿಗೆ ಬೆಲೆ ಕುಸಿದು ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ರಬ್ಬರ್ ಬೆಳೆಗಾರರ ಸಮಸ್ಯೆಗೆ ಸ್ಪಂದಿಸಬೇಕು ಎಂದು ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ ಶಿವಕಮಾರ್ ಅವರಿಗೆ ಕಿಸಾನ್ ಕಾಂಗ್ರೆಸ್ ಸಮಿತಿ ಜಿಲ್ಲಾ ಅಧ್ಯಕ್ಷ ಮೋಹನ್ ಕಲ್ಮಂಜ ಅವರು ಮನವಿ ನೀಡಿದರು.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ರವರು ಅಧ್ಯಕ್ಷರಾಗಿ ಮೊದಲಬಾರಿಗೆ ತಾಲೂಕಿಗೆ ಆಗಮಿಸಿದ ಹಿನ್ನಲೆಯಲ್ಲಿ ದ.ಕ ಜಿಲ್ಲಾ ಕಿಸಾನ್ ಸಮಿತಿಯಿಂದ ರೈತರ ಪರವಾಗಿ ಹಸಿರು ಶಾಲು ಹಾಕಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಮಾಜಿ ಶಾಸಕ ಕೆ ವಸಂತ ಬಂಗೇರ, ಮಾಜಿ ಸಚಿವರಾದ ಗಂಗಾಧರ್ ಗೌಡ,ಅಭಯ ಚಂದ್ರ ಜೈನ್, ರಮಾನಾಥ್ ರೈ ,ವಿನಯ್ ಕುಮಾರ್ ಸೊರಕೆ, ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ ಹರೀಶ್ ಕುಮಾರ್,ಬ್ಲಾಕ್ ಅಧ್ಯಕ್ಷ ರಾದ ರಂಜನ್ ಗೌಡ ಶೈಲೇಶ್ ಕುಮಾರ್,ಕಿಸಾನ್ ಕಾಂಗ್ರೆಸ್ ತಾಲೂಕು ಅಧ್ಯಕ್ಷ ದಿನೇಶ್ ಕೋಟ್ಯಾನ್, ಯುವ ಕಾಂಗ್ರೇಸ್ ಅಧ್ಯಕ್ಷ ಅಭಿನಂದನ್ ಹರೀಶ್ ಕುಮಾರ್ ಸೇರಿದಂತೆ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.