ಗಣೇಶ್ ನಗರದ 44 ಮಂದಿ ಮಿತ್ತಬಾಗಿಲು ಶಾಲಾ ಕಾಳಜಿ ಕೇಂದ್ರಕ್ಕೆ ಸ್ಥಳಾಂತರ

ಬೆಳ್ತಂಗಡಿ: ದಿಡುಪೆ ಪರಿಸರದಲ್ಲಿ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಇಲ್ಲಿಯ ನೇತ್ರಾವತಿ ನದಿಯಲ್ಲಿ ಪ್ರವಾಹ ಉಕ್ಕಿ ಹರಿಯುತ್ತಿದ್ದು, ಆನೇಕ ರೈತರ ಕೃಷಿ ತೋಟಗಳಿಗೆ ನೀರು ನುಗ್ಗಿದೆ. ಇಲ್ಲಿಯ ಕಲ್ಬೆಟ್ಟು ಸೇತುವೆ ಸಂಪೂರ್ಣ ಕಡಿತಗೊಂಡಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.


ಮಿತ್ತಬಾಗಿಲು ಗ್ರಾಮದ ಗಣೇಶ್ ನಗರದಲ್ಲಿರುವ 32 ಕುಟುಂಬಗಳನ್ನು ತಾಲೂಕು ಆಡಳಿತದ ವತಿಯಿಂದ ಮಿತ್ತಬಾಗಿಲು ಶಾಲೆಯ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ. ಈ ಕೇಂದ್ರದಲ್ಲಿ 20 ಮಂದಿ ಪುರಷರು, 17 ಮಂದಿ ಮಹಿಳೆಯರು ಹಾಗೂ 7 ಮಂದಿ ಮಕ್ಕಳು ಸೇರಿ 44 ಮಂದಿ ಇದ್ದಾರೆ. ಇವರಿಗೆ ತಾಲೂಕು ಆಡಳಿತದಿಂದ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗಿದೆ. ಇತ್ತಿಚೇಗೆ ಪುತ್ತೂರು ಸಹಾಯಕ ಕಮೀಷನರ್ ಯತೀಶ್ ಉಲ್ಲಾಳ್ ಹಾಗೂ ತಾಲೂಕು ತಹಶೀಲ್ದಾರ್ ಮಹೇಶ್ ಜೆ. ಅವರು ಮಳೆಯಿಂದ ಹಾನಿಗೊಳಗಾದ ಗಣೇಶ್ ನಗರಕ್ಕೆ ಭೇಟಿ ನೀಡಿ, ಈ ಪ್ರದೇಶ ಅಪಾಯಕಾರಿಯಾಗಿದ್ದು, ಇಲ್ಲಿಯ ಕುಟುಂಬಗಳ ಸ್ಥಳಾಂತರಕ್ಕೆ ಸೂಚನೆ ನೀಡಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.