ಬೆಳ್ತಂಗಡಿ: ಶ್ರೀ.ಗು.ನಾ.ಸ್ವಾ.ಸೇ.ಸಂಘದಲ್ಲಿ ಸಂಘಟನೆಯ ಸಭೆ,ಸನ್ಮಾನ

ಬೆಳ್ತಂಗಡಿ: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಲ್ಲಿ ಸಂಘಟನೆಯ ಬಗ್ಗೆ ಸಭೆ ನಡೆಸಲಾಯಿತು. ಸಭೆಯಲ್ಲಿ ಸಂಘಟನೆ,ಗುರುಪೂಜೆ , ವಿದ್ಯಾರ್ಥಿ ವೇತನ ನೀಡುವ ಬಗ್ಗೆ ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ಬೆಳ್ತಂಗಡಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾದ ಸಂಘದ ಕೋಶಾಧಿಕಾರಿ ಚಿದಾನಂದ ಪೂಜಾರಿ ಎಲ್ದಕ್ಕ ಹಾಗೂ ಬಂಗಾಡಿ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ಸಂಘದ ನಿರ್ದೇಶಕ ಹರೀಶ್ ಸಾಲಿಯಾನ್ ಮೋರ್ತಾಜೆ ಅವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು.


ಕಾರ್ಯಕ್ರಮದಲ್ಲಿ ಸಂಘದ ಗೌರವ ಅಧ್ಯಕ್ಷ, ಮಾಜಿ ಶಾಸಕ ಕೆ.ವಸಂತ ಬಂಗೇರ, ಅಧ್ಯಕ್ಷ ಪದ್ಮನಾಭ ಮಾಣಿಂಜ,ಉಪಾಧ್ಯಕ್ಷ ಮನೋಹರ್ ಇಳಂತಿಲ,ಕಾರ್ಯದರ್ಶಿ ನಾರಾಯಣ ಸುವರ್ಣ,ಸಾರಿಗೆ ಇಲಾಖೆಯ ನೀರೀಕ್ಷಕ ಚರಣ್ ಕುಮಾರ್,ಮಾಜಿ ಅಧ್ಯಕ್ಷರಾದ ಭಗೀರಥ ಜಿ, ಯೋಗೀಸ್ ಕುಮಾರ್ ನಡಕ್ಕರ,ಜೊತೆ ಕಾರ್ಯದರ್ಶಿ ಚಂದ್ರಹಾಸ್ ಕೇದೆ, ಯುವ ಬಿಲ್ಲವ ವೇದಿಕೆ ಅಧ್ಯಕ್ಷ ರಂಜಿತ್ ಹೆಚ್.ಡಿ,ಯುವ ಬಿಲ್ಲವ ವೇದಿಕೆ ಮಾಜಿ ಅಧ್ಯಕ್ಷ ಚಿದಾನಂದ ಇಡ್ಯ ಹಾಗೂ ಸಂಘದ ನಿರ್ದೇಶಕರುಗಳು, ಯುವಬಿಲ್ಲವ ವೇದಿಕೆ ಪದಾಧಿಕಾರಿಗಳು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.