ವಾಣಿ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ 74ನೇ ಸ್ವಾತಂತ್ರ್ಯೋತ್ಸವ ಆಚರಣೆ

 

ದೇಶಕ್ಕಾಗಿ ಹೋರಾಡಿದ, ತ್ಯಾಗ, ಬಲಿದಾನ ಮಾಡಿದಂತಹ ಮಹಾನ್ ವ್ಯಕ್ತಿಗಳನ್ನು ನೆನಪಿಸಿಕೊಳ್ಳುವುದು ನಮ್ಮ ಆದ್ಯ ಕರ್ತವ್ಯವಾಗಿದೆ ಎಂದು ವಾಣಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಶ್ರೀ.ಜಿ.ಸೋಮೇಗೌಡ ಹೇಳಿದರು. ಅವರು ವಾಣಿ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ಜರಗಿದ 74ನೇ ಸ್ವಾತಂತ್ರ್ಯೋತ್ಸವದ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡುತ್ತಾ, ರಾಷ್ಟ್ರೀಯ ಭಾವೈಕ್ಯತೆಯೊಂದಿಗೆ ಸಮಾಜದ ಸ್ವಾಸ್ಥ್ಯವನ್ನು ಕಾಪಾಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ.

ಎಲ್ಲವೂ ಪ್ರೀತಿ, ಸೌಹಾರ್ದತೆಯ ಮೂಲಕ ರಾಷ್ಟ್ರಾಭಿಮಾನವನ್ನು ಮೆರೆಯಬೇಕಾಗಿದೆ ಎಂದರು. ವಾಣಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರು, ಪ್ರೌಢಶಾಲಾ ಹಾಗೂ ಪ್ರಾಥಮಿಕ ಶಾಲೆಯ ಶಿಕ್ಷಕ ವೃಂದದವರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ವಾಣಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ.ಡಿ.ಯದುಪತಿ ಗೌಡ ಸ್ವಾಗತಿಸಿದರು. ವಾಣಿ ಆಂಗ್ಲ ಮಾಧ್ಯಮ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಲಕ್ಷ್ಮೀನಾರಾಯಣ ವಂದಿಸಿದರು. ಕಾಲೇಜಿನ ಉಪಪ್ರಾಂಶುಪಾಲರಾದ ಶ್ರೀ ವಿಷ್ಣುಪ್ರಕಾಶ್ ಎಂ ಕಾರ್ಯಕ್ರಮ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.