ಉಜಿರೆ; ಕಿರಿಯಾಡಿ ಶ್ರೀ ಉಮಾಮಹೇಶ್ವರ ಭಜನಾ ಮಂಡಳಿ ನೇತೃತ್ವದಲ್ಲಿ ಶ್ರೀ ಕೃಷ್ಣಜನ್ಮಾಷ್ಟಮಿ ಆಚರಣೆ

ಶ್ರೀ ಉಮಾಮಹೇಶ್ವರ ಭಜನಾ ಮಂಡಳಿ ಕಿರಿಯಾಡಿ ಉಜಿರೆ ಇದರ ನೇತೃತ್ವದಲ್ಲಿ ಶ್ರೀಸದಾಶಿವ ದೇವಸ್ಥಾನದ ವಠಾರದಲ್ಲಿ 30ನೇ ವರ್ಷದ ಶ್ರೀ ಕೃಷ್ಣಜನ್ಮಾಷ್ಟಮಿ ಆಚರಣೆಯು ಸರಕಾರದ ನಿರ್ದೇಶನದಂತೆ ಸರಳ ರೀತಿಯಲ್ಲಿ ಆಚರಿಸಲಾಯಿತು. ಉಧ್ಘಾಟಕರಾಗಿ ವಿಧಾನಪರಿಷತ್ ಸದಸ್ಯರಾದ ಪ್ರತಾಪಸಿಂಹ ನಾಯಕ್ ಆಗಮಿಸಿ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉಧ್ಘಾಟಸಿದರು. ಕ್ರೀಡಾಕೂಟದ ಸಾಂಕೇತಿಕವಾಗಿ ಉಧ್ಘಾಟಕರಿಂದ ಮೊಸರು ಕುಡಿಕೆ ಒಡೆಸಲಾಯಿತು.

ನಂತರ ನಡೆದ ಸರಳ ಸಭಾಕಾರ್ಯಕ್ರಮದಲ್ಲಿ ಭಜನಾ ಮಂಡಳಿಯ ವತಿಯಿಂದ ವಿಧಾನ ಪರಿಷತ್ ಸದಸ್ಯರಾದ ಪ್ರತಾಪಸಿಂಹ ನಾಯಕ್ ರನ್ನು ಸನ್ಮಾನಿಸಲಾಯಿತು.ವೇದಿಕೆಯಲ್ಲಿ  ಕಿರಿಯಾಡಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ  ವಾಸುದೇವ ಸಂಪಿಗೆತ್ತಾಯ, ಭಜನಾ ಮಂಡಳಿಯ ಅಧ್ಯಕ್ಷರಾದ ಶೈಲೇಶ್ ಧರಣಿ, ಕಾರ್ಯದರ್ಶಿ ಗಗನ್ ಗೌಡ, ಉಪಧ್ಯಕ್ಷರಾದ ಶ್ರೀಧರ ಶೆಟ್ಟಿ, ಉಪಸ್ಥಿತರಿದ್ದರು. ಭಜನಾ ಮಂಡಳಿಯ ಅಧ್ಯಕ್ಷರಾದ ಶೈಲೇಶ್ ಧರಣಿ, ಸ್ವಾಗತಿಸಿ, ಧರ್ಣಪ್ಪ ಗೌಡ ಧರಣಿ ಧನ್ಯವಾದ ನೀಡಿದರು. ಕಾರ್ಯಕ್ರಮವನ್ನು ನಿರಂಜನ್ ಕೆ. ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.