HomePage_Banner_
HomePage_Banner_

ಬೆಳ್ತಂಗಡಿ ಬಂಟರ ಯುವ ವಿಭಾಗದಿಂದ ಶೈಕ್ಷಣಿಕ ನಕ್ಷತ್ರಗಳಿಗೆ ಗೌರವ ವಂದನೆ

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ ಗುರುವಾಯನಕೆರೆ ಇದರ ಸಹಯೋಗದಲ್ಲಿ ಬಂಟರ ಯುವ ವಿಭಾಗದಿಂದ ಎಸೆಸೆಲ್ಸಿ ಮತ್ತು ಪಿಯುಸಿ ವಿಭಾಗದಲ್ಲಿ ಶೇಕಡ 90 ಅಂಕಗಳಿಸಿದ ಬಂಟ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನಕ್ಷತ್ರಗಳಿಗೆ ಗೌರವ ಅರ್ಪಣೆ ಕಾರ್ಯಕ್ರಮ ಆ.16ರಂದು ಬಂಟರ ಭವನ ಗುರುವಾಯನಕೆರೆಯಲ್ಲಿ ನಡೆಯಿತು.

ಈ ಕಾರ್ಯಕ್ರಮವನ್ನು ಚಂದ್ರಮೋಹನ್ ರೈ ಫ್ಯಾಮಿಲಿ ಟ್ರಸ್ಟ್ ಉಜಿರೆಯ ಚಂದ್ರಮೋಹನ್ ರೈ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷರಾದ ಪುಷ್ಪರಾಜ್ ಶೆಟ್ಟಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯ ಅಧ್ಯಕ್ಷರಾದ ಜಯರಾಮ್ ಶೆಟ್ಟಿ, ಬಂಟರ ಯುವ ವಿಭಾಗ ಅಧ್ಯಕ್ಷರಾದ ಕಿರಣ್ ಕುಮಾರ್ ಶೆಟ್ಟಿ, ಯುವ ಬಂಟರ ವಿಭಾಗದ ಸಂಚಾಲಕ ವಸಂತ ಶೆಟ್ಟಿ, ಕಾರ್ಯದರ್ಶಿ ಸುಜಯ್ ಶೆಟ್ಟಿ, ಮಹಿಳಾ ವಿಭಾಗದ ಸಾರಿಕಾ ಶೆಟ್ಟಿ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಮಮತಾ ಶೆಟ್ಟಿ ನಿರೂಪಿಸಿದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.