ಸಂಜಯ್ ಗ್ಲೋಬಲ್ ಫೌಂಡೇಶನ್ ವತಿಯಿಂದ 74ನೇ ಸ್ವಾತಂತ್ರ್ಯೋತ್ಸವ

ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ 74ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಂಜಯ್ ಗ್ಲೋಬಲ್ ಫೌಂಡೇಶನ್ ವತಿಯಿಂದ ಸಂಜಯ‌ನಗರದಲ್ಲಿ ದ್ವಜಾರೋಹಣವನ್ನು ಅಧ್ಯಕ್ಷ ಹನೀಫ್ ವರ್ಷಾ ನೆರವೇರಿಸಿದರು.

ಮುಖ್ಯ ಅತಿಥಿಗಳಾಗಿ ಮೆಹಬೂಬ್,ಪಟ್ಟಣ ಪಂಚಾಯತ್ ಸದಸ್ಯ ಜನಾರ್ದನ ಕುಲಾಲ್ ಭಾಗವಹಿಸಿದರು. 2020ನೇ ಸಾಲಿನ SSLC ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಗೊಂಡಿರುವ ಬೆಳ್ತಂಗಡಿಯ ಸಂಜಯ ನಗರ ನಿವಾಸಿ ಇಸ್ಮಾಯಿಲ್ ಅವರ ಪುತ್ರಿ ಫಾತಿಮತ್ ಝಹಿದಾ ಹಾಗೂ ಇನ್ನೋರ್ವ ಸಂಜಯ ನಗರ ನಿವಾಸಿ ಉಮರ್ ಅವರ ಪುತ್ರಿ ಆಯಿಷಾ ಅಲ್ಮಾಸ್ ಇವರನ್ನು ಸಂಜಯ್ ಗ್ಲೋಬಲ್ ಫೌಂಡೇಶನ್ ವತಿಯಿಂದ ಸ್ಮರಣಿಕೆಯನ್ನು ನೀಡಿ ಸನ್ಮಾನಿಸಲಾಯಿತು. ಅಕ್ಬರ್ ಬೆಳ್ತಂಗಡಿ ಕಾರ್ಯಕ್ರಮ ನಿರೂಪಿಸಿದರು. ಗ್ರೂಪ್ ನ ಸದಸ್ಯರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.