ಶ್ರೀ ಕ್ಷೇತ್ರ ಧರ್ಮಸ್ಥಳ ಸೇವಾ ವಿಪತ್ತು ನಿರ್ವಹಣಾ ನಾರಾವಿ ಘಟಕದಿಂದ ದೇವಸ್ಥಾನದ ಸ್ವಚ್ಚತಾ ಕಾರ್ಯ;ಗ್ರಾಮದ ಸುಭೀಕ್ಷೆಗಾಗಿ ದೇವರಿಗೆ ವಿಶೇಷ ಪೂಜೆ

Advt_NewsUnder_1
Advt_NewsUnder_1
Advt_NewsUnder_1

ಸುಲ್ಕೇರಿ: ಶ್ರೀ ಧರ್ಮಸ್ಥಳ ಸೇವಾ ವಿಪತ್ತು ನಿರ್ವಹಣೆ ನಾರಾವಿ ಘಟಕದಿಂದ ಇಂದು ದೇವಸ್ಥಾನದ ಸ್ವಚ್ಚತಾ ಕಾರ್ಯಕ್ರಮ ನಡೆಸಲಾಯಿತು. ಗ್ರಾಮದ ದೇವತೆಯಾದ ಶ್ರೀ ಮಹಾಮ್ಮಾಯಿ ದೇವಸ್ಥಾನದಲ್ಲಿ ಸ್ಥಳೀಯ ಒಕ್ಕೂಟ, ಜನಜಾಗೃತಿ ಸದಸ್ಯರು, ಸ್ವಚ್ಚತಾ ಸೇನಾನಿಗಳ ಸಹಭಾಗಿತ್ವದಲ್ಲಿ ಗ್ರಾಮದ ಸುಭಿಕ್ಷೆಗಾಗಿ ದೇವಿಗೆ ಎಳನೀರು ಅಭಿಷೇಕ ಹಾಗೂ ವಿಶೇಷ ಪೂಜೆ ನಡೆಸಲಾಯಿತು.

ನಂತರ ನಡೆದ ಸಭೆಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರಾದ ಡಾ. ಎಲ್.ಎಚ್.ಮಂಜುನಾಥ್ ಅವರು ಮಾತನಾಡಿದರು.
ಕಾರ್ಯಕ್ರಮದಲ್ಲಿ ತಾಲ್ಲೂಕು ಯೋಜನಾಧಿಕಾರಿ ಯಶವಂತ ಸಾಲಿಯಾನ್, ವಿಪತ್ತು ನಿರ್ವಹಣಾ ಯೋಜನಾಧಿಕಾರಿ ಜೈವಂತ ಪಟಗಾರ, ಮೇಲ್ವಿಚಾರಕ ಗಿರೀಶ್ ಕುಮಾರ್, ಸೇವಾಪ್ರತಿನಿಧಿ ಮಮತಾ ಶೆಟ್ಟಿ, ವಿಪತ್ತು ನಿರ್ವಹಣೆ ಘಟಕದ ಸಂಯೋಜಕ ದಿನೇಶ್ ಶೆಟ್ಟಿ, ಸ್ವಯಂಸೇವಕರಾದ ಸಂದೀಪ್ ಆಚಾರ್ಯ, ಸಂದೀಪ್ ಶೆಟ್ಟಿ, ವಿಕೀತ್ ಶೆಟ್ಟಿ, ಪ್ರಕಾಶ್ ಆಚಾರ್ಯ, ದೇವಸ್ಥಾನ ದ ಸಮಿತಿಯ ಅಧ್ಯಕ್ಷ ಸುರೇಶ್ ಭಟ್, ಕಾರ್ಯದರ್ಶಿ ರವಿ ಶೆಟ್ಟಿ, ಸುಧೀರ್ ಶೆಟ್ಟಿ, ವಿಶ್ವನಾಥ ಶೆಟ್ಟಿ, ಜನಜಾಗೃತಿ ವೇದಿಕೆಯ ತಾಲ್ಲೂಕು ಅದ್ಯಕ್ಷ ನಿತ್ಯಾನಂದ ನಾವರ ,ಸ್ವಚ್ಚತಾ ಸೇನಾನಿ ಸದಾನಂದ ಗೌಡ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ದೇವಸ್ಥಾನದ ಆವರಣದಲ್ಲಿ ಗಿಡನಾಟಿ ಮಾಡಲಾಯಿತು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.