ಸಮುದಾಯ ಅಭಿವೃದ್ಧಿ ವಿಭಾಗ ಮತ್ತು ನಮ್ಮೂರು ನಮ್ಮ ಕೆರೆ ಕಾರ್ಯಕ್ರಮದ ವಾರ್ಷಿಕ ಸಾಧನಾ ವರದಿ ಬಿಡುಗಡೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಕಳೆದ 38 ವರ್ಷದಿಂದ ಕರ್ನಾಟಕ ರಾಜ್ಯದಾದ್ಯಾಂತ ವೈಯಕ್ತಿಕ ಕುಟುಂಬಗಳ ಹಾಗೂ ಸಮುದಾಯದ ಅಭಿವೃದ್ಧಿಗಾಗಿ ಸೇವೆ ಸಲ್ಲಿಸುತ್ತಿದೆ. ಯೋಜನೆಯಲ್ಲಿ ಹಮ್ಮಿಕೊಳ್ಳಲಾದ ಹತ್ತು ಹಲವಾರು ಅಭಿವೃದ್ಧಿ ಕಾರ್ಯಕ್ರಮದಲ್ಲಿ ಸಮುದಾಯ ಅಭಿವೃದ್ಧಿ ಕಾರ್ಯಕ್ರಮ ಪ್ರಮುಖವಾಗಿದೆ.

ಸಮುದಾಯ ಅಭಿವೃದ್ಧಿ ಕಾರ್ಯಕ್ರಮದಲ್ಲಿ ಗ್ರಾಮ ಕಲ್ಯಾಣ ಯೋಜನೆ, ಹಿಂದೂ ರುದ್ರಭೂಮಿ ಅಭಿವೃದ್ಧಿ, ಶಾಲೆಗಳಿಗೆ ಪಿಠೋಪಕರಣ ವಿತರಣೆ, ಜ್ಞಾನದೀಪ ಶಾಲಾ ಶಿಕ್ಷಣ ಕಾರ್ಯಕ್ರಮ, ಸುಜ್ಞಾನನಿಧಿ ಶಿಷ್ಯವೇತನ ವಿತರಣಾ ಕಾರ್ಯಕ್ರಮ, ನಿರ್ಗತಿಕರಿಗೆ ಮಾಸಾಶನ ವಿತರಣೆ, ಜನಮಂಗಲ ಕಾರ್ಯಕ್ರಮ ಇತ್ಯಾದಿ ಪ್ರಮುಖ ಅಭಿವೃದ್ಧಿ ಕಾರ್ಯಕ್ರಮಗಳನ್ನು ರಾಜ್ಯದಾದ್ಯಂತ ಅನುಷ್ಠಾನ ಮಾಡಲಾಗುತ್ತಿದೆ.2019-20 ನೇ ಸಾಲಿನಲ್ಲಿ ಒಟ್ಟು ರೂ. 51 ಕೋಟಿ 88 ಲಕ್ಷ ಅನುದಾನ ನೀಡಲಾಗಿದೆ.
2016ರಿಂದ ನಮ್ಮೂರು ನಮ್ಮ ಕೆರೆ ಯೋಜನೆಯ ಮೂಲಕ ರಾಜ್ಯದಾದ್ಯಂತ ಕುಡಿಯುವ ನೀರಿನ ಕೆರೆಗಳ ಪುನಃಶ್ಚೇತನ ಕಾರ್ಯಕ್ರಮ ನಡೆಯುತ್ತಿದೆ. ಇದೀಗ ರಾಜ್ಯದಲ್ಲಿ 190 ಕೆರೆಗಳನ್ನು ಪುನಶ್ಚೇತನಗೊಳಿಸಲಾಗಿದೆ. ಈವರೆಗೆ ರೂ. 14 ಕೋಟಿ 50 ಲಕ್ಷ ಅನುದಾನ ನೀಡಲಾಗಿದೆ ಹಾಗೂ ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ಕೆರೆ ಸಂಜೀವಿನಿ ಯೋಜನೆಯಡಿಯಲ್ಲಿ 53 ಕೆರೆಗಳನ್ನು ಪುನಶ್ಚೇತನಗೊಳಿಸಲಾಗಿದೆ.

2019-20ನೇ ಸಾಲಿನ ಪ್ರಗತಿಯ ವರದಿಯನ್ನು  ಡಾ|| ಡಿ.ವೀರೇಂದ್ರ ಹೆಗ್ಗಡೆಯವರು ಮತ್ತು ಹೇಮಾವತಿ ವಿ. ಹೆಗ್ಗಡೆಯವರು ಬಿಡುಗಡೆ ಮಾಡಿ ಶುಭ ಹಾರೈಸಿರುತ್ತಾರೆ. ಮುಖ್ಯ ಕಾರ್ಯನಿರ್ವಾಹಕ ನಿರ್ದೇಶಕರಾದ ಡಾ| ಎಲ್.ಹೆಚ್.ಮಂಜುನಾಥ್‌ರವರು, ಸಮುದಾಯ ವಿಭಾಗದ ಪ್ರಾದೇಶಿಕ ನಿರ್ದೇಶಕರಾದ ಎ.ಶ್ರೀಹರಿ, ಕೃಷಿ ವಿಭಾಗದ ಪ್ರಾದೇಶಿಕ ನಿರ್ದೇಶಕರಾದ ಮನೋಜ್ ಮಿನೇಜಸ್ ಮತ್ತು ಶುದ್ಧಗಂಗಾ/ಕೆರೆ ವಿಭಾಗದ ನಿದೆಶಕರಾದ ಲಕ್ಷ್ಮಣ್.ಎಂ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.