ಸೇಕ್ರೆಡ್ ಹಾರ್ಟ್ ಕಾಲೇಜು, ಮಡಂತ್ಯಾರು ಎನ್‌ಎಸ್‌ಎಸ್ ಘಟಕದ ವತಿಯಿಂದ ‘ಸದ್ಭಾವನಾ ದಿನ’ ಆಚರಣೆ

ಮಡಂತ್ಯಾರು:ಮಾಜಿ ಪ್ರಧಾನಿ, ದಿವಂಗತ ರಾಜೀವ್ ಗಾಂಧಿ ಇವರ ಜನ್ಮದಿನದ ನೆನಪಿಗಾಗಿ ಪ್ರತಿವರ್ಷ ಆ.20 ರಂದು ಸದ್ಭಾವನಾ ದಿನವನ್ನು ಆಚರಿಸಲಾಗುತ್ತದೆ. ಈ ಸಂದರ್ಭದಲ್ಲಿ, ಸೇಕ್ರೆಡ್ ಹಾರ್ಟ್ ಕಾಲೇಜಿನ ಎನ್‌ಎಸ್‌ಎಸ್ ಘಟಕವು ಎನ್‌ಎಸ್‌ಎಸ್ ಸ್ವಯಂಸೇವಕರಿಗೆ ಆ ದಿನದ ಸಂದೇಶವನ್ನು ಹಂಚಿಕೊಳ್ಳಲು ಆನ್‌ಲೈನ್ ಕಾರ್ಯಕ್ರಮವನ್ನು ಆಯೋಜಿಸಿತು.


ಪ್ರಾಂಶುಪಾಲರಾದ , ಡಾ.ಜೋಸೆಫ್ ಎನ್.ಎಂ ಭಾಗವಹಿಸಿದವರನ್ನು ಉದ್ದೇಶಿಸಿ ಸದ್ಭಾವನಾ ದಿನಾಚರಣೆಯ ಹಿನ್ನೆಲೆಯನ್ನು ತಿಳಿಸುತ್ತಾ, ವಿದ್ಯಾರ್ಥಿಗಳು ಶಾಂತಿ,ವಾತ್ಸಲ್ಯ ಮತ್ತು ಕೋಮು ಸೌಹಾರ್ದತೆಯಿಂದ ಬದುಕಬೇಕೆಂದು ವಿನಂತಿಸುತ್ತಾ ಅವರು ಆದರ್ಶ ಸಮಾಜ ನಿರ್ಮಾಣಕ್ಕೆ ಕರೆ ಕೊಟ್ಟರು. ಮತ್ತು ರಾಷ್ಟ್ರೀಯ ಏಕೀಕರಣದ ಮಹತ್ವವನ್ನು ವಿದ್ಯಾರ್ಥಿಗಳಿ ತಿಳಿಸಿದರು. ಕೊನೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳೆಲ್ಲರು ಸದ್ಭಾವನಾ ದಿನದ ಪ್ರಮಾಣವಚನ ಸ್ವೀಕರಿಸಿದರು. ಎನ್‌ಎಸ್‌ಎಸ್ ಘಟಕ 1 ಯೋಜನಾಧಿಕಾರಿ ಪ್ರೊ.ಜನಾರ್ಧನನ್ ನಾಯರ್ ಸ್ವಾಗತಿಸಿದರು ಮತ್ತು ಘಟಕ 2 ರ ಯೋಜನಾಧಿಕಾರಿ  ರಾಬಿನ್ ಜೋಸೆಫ್ ಸೆರಾ ಇವರು ಕಾರ್ಯಕ್ರಮ ನಿರೂಪಿಸಿದರು. ಗೂಗಲ್ ಮೀಟ್ ಮೂಲಕ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.